ಕಲಬುರಗಿ: ವಿದ್ಯಾರ್ಥಿಗಳು ಎಷ್ಟೇ ಅಂಕಗಳು, ಪದವಿ ಗಳಿಸಿ, ಸಂಸ್ಕಾರ, ಮಾನವೀಯ ಮೌಲ್ಯಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳದಿದ್ದರೆ ಪ್ರಯೋಜನವಿಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಪ್ರಯತ್ನಶೀಲತೆ, ಶೃಜನಶೀಲತೆ, ಧನಾತ್ಮಕ ಚಿಂತನೆ ಮೈಗೂಡಿಸಿಕೊಂಡು ಮುನ್ನೆಡೆದರೆ, ಉನ್ನತ ಸಾಧನೆ ಸಾಧಿಸುವದರ ಜೊತೆಗೆ ನಿಮ್ಮ ಜೀವನ ಸುಂದರವಾಗಲು ಸಾಧ್ಯವಿದೆ ಎಂದು ಹಿರಿಯ ಸಾಹಿತಿ ಎಸ್.ಪಿ.ಸುಳ್ಳದ ಹೇಳಿದರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ 18ನೇ ವಾರ್ಷಿಕೋತ್ಸವ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಸುನಿಲ ಹುಡಗಿ ಮಾತನಾಡಿ, ಶೈಕ್ಷಣಿಕ ತ್ರಿಕೋನ ವ್ಯವಸ್ಥೆಯ ಸಫಲತೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕ-ಪೋಷಕರು ಜವಾಬ್ದಾರಿಯಿಂದ ದೂರ ಸರಿಯಬಾರದು. ಎಲ್ಲರು ಸಮಪರ್ಣ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ವಿದ್ಯಾರ್ಥಿಯ ಬದುಕು ಸಫಲತೆಯಾಗಲು ಸಾಧ್ಯವಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಸಿ.ಗಾರಂಪಳ್ಳಿ, ಪಿಡಿಎ ಇಂಜಿನಿಯರಿಂಗ ಕಾಲೇಜಿನ ಪ್ರಾಧ್ಯಾಪಕ ರೇವಣಸಿದ್ದೇಶ್ವರ ಬಿ.ಡಿ., ನ್ಯಾಯವಾದಿ ಶೇಖ್ ಅಲಿಯೋದ್ದೀನ್ ಜುನೈದಿ, ನಿವೃತ್ತ ದೈಹಿಕ ಶಿಕ್ಷಕ ನವಾಬ ಖಾನ್, ಸೈದ್ ನಜೊರೋದ್ದೀನ್ ಮುತುವಲ್ಲಿ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕ ಮಹಾಲಿಂಗಪ್ಪ ಮುಲಗೆ, ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಹಾಗೂ ಪಾಲಕ-ಪೋಷಕರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳು, ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಿಗೆ ವಿಶೇಷವಾಗಿ ಸತ್ಕರಿಸಿ, ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…