ಬಿಸಿ ಬಿಸಿ ಸುದ್ದಿ

ಶಾಸಕ ಆರ್.ವಿ ನಾಯಕ ಪಂಚಭೂತಗಳಲ್ಲಿ ಲೀನ: ಅಂತಿಮ ದರ್ಶನಕ್ಕೆ ಸಿದ್ರಾಮಯ್ಯ ಖರ್ಗೆ ಸೇರಿ ಹರಿದು ಬಂದ ಜನಸಾಗರ

ಸುರಪುರ: ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಅನಾರೋಗ್ಯ ದಿಂದ ನಿಧನರಾಗಿದ್ದ ನಂತರ ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಳಗಿನ ಜಾವ ಸುರಪುರಕ್ಕೆ ತರಲಾಗಿತ್ತು,ಮೊದಲು ಶಾಸಕರ ಗೃಹ ಕಚೇರಿ ವಸಂತ ಮಹಲ್ನಲ್ಲಿ ಕುಟುಂಬಸ್ಥರ ದರ್ಶನಕ್ಕೆ ಇಡಲಾಗಿತ್ತು,ನಂತರ ಬೆಳಿಗ್ಗೆ 11 ಗಂಟೆಗೆ ಮೆರವಣಿಗೆ ಮೂಲಕ ಶ್ರೀ ಪ್ರಭು ಕಾಲೇಜ್ ಮೈದಾನಕ್ಕೆ ತರಲಾಗಿತ್ತು,ಕಾಲೇಜ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಮಧ್ಯಾನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡರು.ಇದೇ ಸಮಯದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ,ಶರಣಬಸಪ್ಪ ದರ್ಶನಾಪುರ,ಬಿ. ನಾಗೇಂದ್ರ,ವಿವಿಧ ನಿಗಮಗಳ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್,ಬಸನಗೌಡ ದದ್ದಲ್,ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್,ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ್, ಜಿಲ್ಲಾಧಿಕಾರಿ ಡಾ:ಸುಶೀಲಾ ಬಿ,ಜಿ.ಪಂ ಸಿಇಓ ಗರಿಮಾ ಪನ್ವಾರ್ ಸೇರಿದಂತೆ ಅನೇಕರು ಆಗಮಿಸಿ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,ನಾನು ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ಬಂದಿದ್ದೆ,ಆದರೆ ಆಗ ಹುಷಾರಾಗಿರುವುದಾಗಿ ಮಾತನಾಡಿದ್ದರು,ನಿನ್ನೆ ಅವರ ನಿಧನದ ನಂತರ ಆಸ್ಪತ್ರೆಗೆ ಹೋಗಿ ಬಂದೆ,ಇಷ್ಟು ಬೇಗ ಅವರು ನಿಧನರಾಗಿರುವುದು ನೋವಿನ ಸಂಗತಿಯಾಗಿದೆ,ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ,ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದರು.

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ,ರಾಜಾ ವೆಂಕಟಪ್ಪ ನಾಯಕ ಒಬ್ಬ ಆದರ್ಶ ರಾಜಕಾರಣಿ,ಅವರೊಂದಿಗೆ ಸುಮಾರು ಐವತ್ತು ವರ್ಷಗಳ ಒಡನಾಟವಿತ್ತು,ಅವರ ತಂದೆ ರಾಜಾ ಕುಮಾರ ನಾಯಕ ನನ್ನ ಸಹಪಾಠಿಯಾಗಿದ್ದರು,ಈ ಭಾಗದ ನೀರಾವರಿ ಸೇರಿ ಅಭಿವೃಧ್ಧಿಗೆ ಅನೇಕ ಬಾರಿ ನನ್ನೊಂದಿಗೆ ಚರ್ಚಿಸಿದ್ದರು, ಕಾಂಗ್ರೆಸ್ ಪಕ್ಷದ ಸಿಸ್ತಿನ ಸಿಪಾಯಿಯಂತಿದ್ದರು, ಇಂದು ಅವರು ನಮ್ಮೆಲ್ಲರನ್ನು ಅಗಲಿರುವುದು ತುಂಬಾ ನೋವು ತರಿಸಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ,ಸತೀಶ ಜಾರಕಿಹೊಳಿ, ಬಿ.ನಾಗೇಂದ್ರ, ವಿಜಯಾನಂದ ಕಾಶಪ್ಪನವರ್,ಕರೆಮ್ಮ ನಾಯಕ ಮಾತನಾಡಿ ಶೋಕ ವ್ಯಕ್ತಪಡಿಸಿದರು.ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಪೊಲೀಸರು ಅಶ್ರುವಾಯು ಸಿಡಿಸಿ ಗೌರವ ವಂದನೆ ಸಲ್ಲಿಸಿದರು.ಸಾಯಂಕಾಲ ನಾಲ್ಕು ಗಂಟೆಗೆ ಅಂತಿಮ ಯಾತ್ರೆಯನ್ನು ಆರಂಭಿಸಲಾಯಿತು.ಅಂತಿಮ ದರ್ಶನಕ್ಕೆ ಆಗಮಿಸಿದ್ದ ಸಾವಿರಾರು ಜನ ಆರ್.ವಿ ನಾಯಕ ಅವರು ಅಭಿಮಾನಿಗಳ ಕಣ್ಣೀರ ಧಾರೆಯೊಂದಿಗೆ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡರು,ನಂತರ ನಗರದ ಹೊಸಬಾವಿ ಬಳಿಯಲ್ಲಿನ ಅವರ ಸ್ಮಶಾನ ಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ರಾಜಾ ವೆಂಕಟಪ್ಪ ನಾಯಕ ಅವರ ಸುಪುತ್ರ ರಾಜಾ ವೇಣುಗೋಪಾಲ ನಾಯಕ ಅಗ್ನಿ ಸ್ಪರ್ಷ ನೀಡಿದರು.

ಈ ಸಂದರ್ಭದಲ್ಲಿ ರಾಜಾ ವಾಸುದೇವ ನಾಯಕ,ರಾಜಾ ವೆಂಕಪ್ಪ ನಾಯಕ,ವಿಠ್ಠಲ್ ಯಾದವ್,ವೆಂಕೋಬ ಯಾದವ್,ರಾಜಾ ಸಂತೋಷ ನಾಯಕ,ರಾಜಾ ಕುಮಾರ ನಾಯಕ,ರಾಜಾ ವಿಜಯಕುಮಾರ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago