ಕಲಬುರಗಿ: ಸುರಪುರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ವಿಧಾನ ಸಭೆಯಲ್ಲಿ ಮಾತನಾಡಿರುವ ಅವರು ರಾಜಾ ವೆಂಕಟಪ್ಪ ನಾಯಕರು ಈಚೆಗಷ್ಟೇ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷತೆ ವಹಿಸಿದ್ದರು, ಜೊತೆಗೇ ತಾವು ಅಧ್ಯಕ್ಷರಾಗಿರುವ ಕೆಕೆಆರ್‌ಡಿಬಿಯಲ್ಲೂ ಸದಸ್ಯರಾಗಿದ್ದರು. ಹೆಚ್ಚಿನ ಅನುದಾನ ಮಂಡಳಿಗೆ ತಂದು ಅಭಿವೃದ್ಧಿ ಮಾಡುವ ಕನಸು ಕಂಡಿದ್ದರು. ಆದರೆ ವಿಧಿ ಅವರನ್ನು ಬಾರದ ಲೋಕಕ್ಕೆ ಕರೆದೊಯ್ದಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋಡುವಂತೆ ತಾವು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
1994 ರಲ್ಲಿ ರಾಜಾ ವೆಂಕಟಪ್ಪ ನಾಯಕರು ಮೊದಲ ಬಾರಿಗೆ ಶಾಸಕರಾದಾಗಿನಿಂದ ತಮ್ಮ ತಂದೆಯವರ ಜೊತೆ ತುಂಬ ಅನ್ಯೋನ್ಯ ಸಂಬಂಧ ಹೊಂದಿದ್ದರೆಂದು ಮೆಲಕು ಹಾಕಿರುವ ಡಾ. ಅಜಯ್ ಸಿಂಗ್ ಕೆಕೆಆರ್‌ಡಿಬಿ ಅಧ್ಯಕ್ಷರಾಗಿಯೂ ತವು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುವುದಾಗಿ ಹೇಳಿದ್ದಾರೆ.
ವೆಂಕಟಪ್ಪ ನಾಯಕರ ಅಕಾಲಿಕ ನಿಧನದ ದುಃಖ ಭರಿಸುವ ಶಕ್ತಿ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ದೇವರು ದಯಪಾಲಿಸಲಿ ಎಂದು ಡಾ. ಅಜಯ್ ಸಿಂಗ್ ಪ್ರಾರ್ಥಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…