ಹೈದರಾಬಾದ್ ಕರ್ನಾಟಕ

ಸಚಿವ ಶರಣ ಪ್ರಕಾಶ್ ಪಾಟೀಲ್ ತವರೂರಲ್ಲಿ 8 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಠಾಣೆಗೆ ಮುತ್ತಿಗೆ

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಸ್ವಗ್ರಾಮ ತಾಲ್ಲೂಕಿನ ಊಡಗಿಯಲ್ಲಿ ಕಳೆದ ಭಾನುವಾರ ರಾತ್ರಿ ಸುಮಾರು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಹಲ್ಲೆಗೊಳಗಾದವರು ಕಲಬುರಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಉದ್ರಿಕ್ತಗೊಂಡ ಒಂದು ಕೋಮಿನ ಜನರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ರಾತ್ರಿ ಹತ್ತು ಗಂಟೆಗೆ ಪೋಲಿಸ್ ಠಾಣೆಯ ಮುಖ್ಯ ರಸ್ತೆ ತಡೆದು ಮುಸ್ಲಿಂ ಸಮಾಜದ ಮುಖಂಡರು ಹಾಗೂ ಯುವಕರು ಹೋರಾಟ ಆರಂಭಿಸಿದರು. ಹಲ್ಲೆ ಮಾಡಿದವರಿಗೆ ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

ಘಟನೆಯ ವಿವರ: ಕಳೆದ 23ರಂದು ಮಧ್ಯರಾತ್ರಿಯಲ್ಲಿ ಊಡಗಿ ಗ್ರಾಮದ ಸರ್ಕಾರಿ ಆಸ್ಪತ್ರೆ ಬಳಿ ನಂಬರ್‍ನಲ್ಲಿ ನಿಲ್ಲಿಸಿದ್ದ 4ರಿಂದ ಐದು ಆಟೋಗಳನ್ನು ಯಾರೋ ಅಪರಿಚಿತ ವ್ಯಕ್ತಿಗಳು ಆಟೋ ಗ್ಲಾಸ್ ಹಾಗೂ ಟಾಪ್ ಜಖಂಗೊಳಿಸಿ ಹಾಳು ಮಾಡಿದ್ದರು. ಆ ಕುರಿತು ಮರುದಿನ 24ರಂದು ಪೋಲಿಸ್ ಠಾಣೆಗೆ ಸೈಯದ್ ಹಮೀದ್ ಮತ್ತು ಗುಲಾಮಸಾಬ್ ಅವರಿಬ್ಬರೂ ದೂರು ಸಲ್ಲಿಸಿದ್ದರು. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಕಿಡಿಗೇಡಿಗಳು ಮಲ್ಲಿಕಾರ್ಜುನ್ ಮತ್ತು ಅವರ ಸಹಚರರು 10- 15 ಜನ ಯುವಕರು ಸೇರಿ ಜವರ್ ಪಟೇಲ್(48), ಸೈಯದ್ ಹಮೀದ್(54), ಸೈಯದ್ ಮೋಸಿನ್(25), ರಸ್ತಾಗಿರ(22), ಚಾಂದ್ ಪಾಶಾ (25), ಸದ್ದಾಂ ಸೇರಿದಂತೆ ಒಟ್ಟು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಯಿಂದಾಗಿ ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಕಲಬುರಗಿ ಜಿಮ್ಸ್ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಜವರ್ ಪಟೇಲ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಜಿಮ್ಸ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರವಾನಿಸಿ ತುರ್ತು ಹವಾನಿಯಂತ್ರಿತ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ಗ್ರಾಮದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿದೆ. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚೇಂದ್ರ. ಹೆಚ್ಚುವರಿ ವರಿಷ್ಠಾಧಿಕಾರಿ ಶ್ರೀನಿಧಿ, ಸಿಪಿಐ ಸಂಗಮನಾಥ್ ಹಿರೇಮಠ್, ಶಹಾಬಾದ್ ಸಿಪಿಐ ಶಂಕರಗೌಡ, ಮಂಜುನಾಥ್, ಸಿಪಿಐ ತಿರುಮೇಶ್ ಮುಂತಾದವರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago