ಕಲಬುರಗಿ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ಶಾಸಕ, ಕಾಂಗ್ರೆಸ್ ಹಿರಿಯ ನಯಕ ನಾಯಕ ರಾಜಾ ವೆಂಕಟಪ್ಪ ನಾಯಕ್ ಅವರ ನಿಧನಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ತಮ್ನ ಆತ್ಮೀಯರಾಗಿದ್ದ ಹಾಗೂ ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ, ಸಂಘಟನೆಗೆ ತುಂಬಲಾರದ ನಷ್ಟ ಉಂಟಾಗಿದೆ. ಜನನುರಾಗಿ, ಸದಾ ಜನ ಕಲ್ಯಾಣದ ಚಿಂತನೇ ಮಾಡುತ್ತಿದ್ದ ವೆಂಕಟಪ್ಪ ನಾಯಕರು ಸುರಪುರ ಜನಮನ ದಲ್ಲಿದ್ದರು. ಇಂತಹ ಜನನುರಾಗಿ ಜನ ನಾಯಕನ ನಿಧನದಿಂದ ಸುರುಪುರ ಕ್ಷೇತ್ರದ ಜನತೆಗೆ ಸಹಜವಾಗಿಯೇ ಆಘಾತವಾಗಿದೆ.
ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಇತ್ತೀಚಿಗಷ್ಟೇ ಅಧಿಕಾರ ಸ್ವೀಕರಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ್ ಸಾಕಷ್ಟು ಸುಧಾರಣೆ ಕ್ರಮಗಳಿಂದಗಿ ಬರುವ ದಿನಗಳಲ್ಲಿ ನಿಗಮವನ್ನು ಹೆಚ್ಚು ಎತ್ತರಕ್ಕೆ ಕೊಂಡೋಯುವ ಕನಸು ಕಂಡಿದ್ದರು. ಅವೆಲ್ಲ ನನಸಾಗುವ ಮೊದಲೇ ಅಕಾಲಿಕ ನಿಧನ ಹೊಂದಿದ್ದಾರೆ.
ಅವರ ಕುಟುಂಬಕ್ಕೆ ದೇವರು ದುಃಖ ಸಹಿಸುವ ಶಕ್ತಿ ದಯಪಾಲಿಸಲಿ, ಅವರ ಅಭಿಮಾನಿ ಗಳಿಗೆ ಭಗ ವಂತ ದುಃಖ ಭರಿಸುವ ಶಕ್ತಿ ಕೊಡಲಿ. ನಾನು ಅಗಲಿದ ಜನ ನಾಯಕ ವೆಂಕಟಪ್ಪ ನಾಯಕ ಇವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸುವೆ, ಆ ಮೂಲಕ ಅವರ ಆತ್ಮಕ್ಕೆ ಚಿರ ಶಾಂತಿ ಕೋರುವೆ ಎಂದು ಅಲ್ಲಮ ಪ್ರಭು ಪಾಟೀಲರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…