ಬಿಸಿ ಬಿಸಿ ಸುದ್ದಿ

“ಪಾಶ” ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಗಳ ಗರಿ

ಕಲಬುರಗಿ : “ಪಾಶ” ಕಿರುಚಿತ್ರ ಗಧಾಗ್ರಜ ಫಿಲಂಸ್ ನ ಅಡಿಯಲ್ಲಿ ನಿರ್ಮಾಣಗೊಂಡಿದ್ದು, ಈ ಕಿರುಚಿತ್ರ ಸರಾಸರಿ 8 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ ಅವರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಾ ಚೊಚ್ಚಲ ನಿರ್ದೇಶನಕ್ಕೆ ಪ್ರಯತ್ನಸಿದ್ದಾರೆ.

ಇಡೀ ತಂಡ ಕಲಬುರಗಿ ಭಾಗದವರೇ ಆಗಿದ್ದು, ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿಯನ್ನು ಕಿತ್ತೊಗೆಯಲು ಶ್ರಮಿಸಿದ್ದಾರೆ ಹಾಗೂ ಅದರಂತೆ ಜಯಸಿದ್ದಾರೆ.

ಈ ಕಿರುಚಿತ್ರಕ್ಕೆ ಹಿರಿಯ ಸಾಹಿತಿ ಹಾಗೂ ನಿರ್ದೇಶಕ “ಜೋಗಿ” ( ಗಿರೀಶರಾವ ಹತ್ವಾರ ) ಅವರ ಲೈಫ್ ಈಸ್ ಬ್ಯೂಟಿಫುಲ್ ಕೃತಿಯಲ್ಲಿಯ ಮೊದಲ ಕತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.”ಪಾಶ” ಬೆಂಗಳೂರಿನ “ವಿಡಿಯೋಟೇಪ್ ಫಿಲ್ಮ್ ಫೆಸ್ಟಿವಲ್” ನಲ್ಲಿ ‘ಉತ್ತಮ ಸಾಮಾಜಿಕ ಸಂದೇಶ’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

ಅದೇ ರೀತಿ ಕೊಲ್ಕತ್ತಾದ ಪ್ರತಿಷ್ಠಿತ “ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ”ದಲ್ಲಿ “ಉತ್ತಮ ಕನ್ನಡ ಕಿರುಚಿತ್ರ” ಹಾಗೂ ಮುಂಬೈನ “ಜಾಶ್ನೆ ಚಲನಚಿತ್ರೋತ್ಸವ” ದಲ್ಲಿಯೂ ಉತ್ತಮ ಕನ್ನಡ ಕಿರುಚಿತ್ರ” ಪ್ರಶಸ್ತಿ ಪಡೆದಿದೆ. ಹಾಗೂ ಮಹಾರಾಷ್ಟ್ರದ “ರೀಲ್ಸ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ” ಉತ್ತಮ ಕಿರುಚಿತ್ರ ” ವಿಭಾಗದಲ್ಲಿ ತನ್ನ ಛಾಪು ಮೂಡಿಸಿದೆ , ಮತ್ತು ಆನ್ ಲೈನ್ ಫೆಸ್ಟಿವಲ್ ಗಳಾದ “ಡೈಮಂಡ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ” ದಲ್ಲಿ “ಉತ್ತಮ ಕತೆ” ಹಾಗೂ “ಐಕಾನಿಕ್ ಶಾರ್ಟ್ ಸಿನಿ ಅವಾರ್ಡ್ಸ್” ನಲ್ಲಿಯೂ “ಉತ್ತಮ ಕತೆ” , “ಉತ್ತಮ ಪ್ರಾಯೋಗಿಕ ಕಿರುಚಿತ್ರ” , “ಉತ್ತಮ ಕನ್ನಡ ಕಿರುಚಿತ್ರ” ವಿಭಾಗದಲ್ಲಿ ಜಯಭೇರಿ ಭಾರಿಸಿದೆ.

ಈ ಗೆಲುವಿಗೆ ತಂಡದ ಎಲ್ಲಾ ಸದಸ್ಯರ ಸಹಕಾರ , ಪರಿಶ್ರಮವೇ ಕಾರಣ , ಈ ಗೆಲುವನ್ನ ಅವರೊಂದಿಗೆ ಹಂಚಿಕೊಳ್ಳುವುದಕ್ಕೆ ತುಂಬಾ ಸಂತಸ ಎನಿಸುತ್ತದೆ ಎನ್ನುವುದು ನಿರ್ದೇಶಕರ ಅಭಿಪ್ರಾಯ.

ಮುಖ್ಯಪಾತ್ರದಲ್ಲಿ ಕಿರುತೆರೆಯ ( ಮುಕ್ತ ಮುಕ್ತ , ಮಹಾಸತಿ, ಗಂಗಾ ಧಾರಾವಾಹಿ ಖ್ಯಾತಿಯ ) ಹಿರಿಯ ನಟ ವಿಜಯ ಕುಲಕರ್ಣಿ ನಟಿಸಿದ್ದರೆ.

ಕಲರ್ಸ್ ಕನ್ನಡ ವಾಹಿನಿಯ , ಕಾಮಿಡಿ ಕಂಪನಿ ಖ್ಯಾತಿಯ ಸೋಮಶಂಕರ್ ಬಿರಾದಾರ ಅವರು ಪ್ರಮುಖ ಪಾತ್ರವೊಂದರಲ್ಲಿ ತೆರೆ ಹಂಚಿಕೊಂಡಿದ್ದಾರೆ.

ರಂಗಾಯಣ ಕಲಾವಿದರಾದ ಉಮೇಶ್ ಪಾಟೀಲ್ , ಶ್ರೀನಿವಾಸ ದೋರನಳ್ಳಿ , ಕೌಶಿಕ್ ಕುಲಕರ್ಣಿ , ಪ್ರದೀಪ ಬೆಳಮಗಿ , ರಿಷಿಕೇಶ ಕುಲಕರ್ಣಿ , ನೀಲಾಂಬಿಕಾ , ಲಕ್ಷ್ಮೀ ಅಥಣಿ ತಾರಾಗಣದಲ್ಲಿದ್ದಾರೆ. ಕುಮಾರಿ ಸ್ಪೂರ್ತಿ ಅಥಣಿ , ಸ್ನೇಹ , ಕಾವ್ಯ , ವೈಷ್ಣವಿ ಬಾಲ ಕಲಾವಿದೆಯರಾಗಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಸಹ ನಿರ್ದೇಶಕರಾಗಿ ಸೋಮಶಂಕರ್ ಬಿರಾದಾರ , ಸಹಾಯಕ ನಿರ್ದೇಶಕರಾಗಿ ಅಂಬರೀಶ್ ಮರಾಠಾ ಕಾರ್ಯ ನಿರ್ವಹಿಸಿದ್ದಾರೆ.

ಛಾಯಾಗ್ರಾಹಕರಾಗಿ ರಾಘು ಮರೆನೂರ , ಸಂಕಲನ ಓಂಕಾರ ಮತ್ತು ಭಾಗ್ಯೇಶ್ ಪಾಟೀಲ್ ಜಂಟಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೂ ಸುಚೀನ್ ಶರ್ಮಾ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ಚಿತ್ರ ನಿರ್ದೇಶಕ ಲಕ್ಷ್ಮಿಕಾಂತ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago