ಕಲಬುರಗಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಳಲಿದೆ. ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಮುಂತಾದ ಘಟಾನುಘಟಿ ನಾಯಕರ ಭವಿಷ್ಯ ನಿರ್ಧರಿಸಿರುವ ಈ ಚುನಾವಣೆ ಇದಾಗಿದೆ. ಬಿಗಿ ಬಂದೋಬಸ್ತ್ ನಡುವೆ ಚುನಾವಣೆ ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೇ ನೋಡಿಕೊಳ್ಳಲು ಆಯೋಗ ಮುನ್ನೆಚ್ಚರಿಕಾ ಕ್ರಮವಾಗಿ ಸುಮಾರು 45 ಸಾವಿರ ಪೊಲೀಸರು ಭದ್ರತೆಗಾಗಿ ನಿಯೋಜಿಸಿದೆ.
ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸುಮಾರು 2.43 ಕೋಟಿ ಮತದಾರರು 237 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ.
ಈ ಎಲ್ಲಾ ಕ್ಷೇತ್ರಗಳಲ್ಲಿ ಸುಮಾರು 28,028 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ 5,674 ಸೂಕ್ಷ್ಮ, 22,354 ಸಾಮಾನ್ಯ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಆಯೋಗ ಒಟ್ಟು 90,997 ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ ಎಂದು ತಿಳಿದು ಬಂದಿದೆ.
ಚುನಾವಣಾ ಕರ್ತವ್ಯಕ್ಕಾಗಿ 1531 ವಲಯ ಸಂಚಾರಿ ಗಸ್ತು ವಾಹನಗಳು, 337 ವಲಯ ಮೇಲುಸ್ತುವಾರಿ ಸಂಚಾರಿ ಗಸ್ತು, 125 ಬಿಎಸ್‍ಪಿ ಸಂಚಾರಿ ಗಸ್ತು, 382 ಸಂಚಾರಿ ತಂಡಗಳು, 384 ಸ್ಥಿರ ಕಣ್ಗಾವಲು ತಂಡಗಳು, 5 ಸಿಆರ್‍ಪಿಎಫ್ ಪಡೆಗಳು, ಸೂಕ್ಷ್ಮ ಮತಗಟ್ಟೆಗಳಿಗೆ 912 ಸಿಆರ್ಪಿಎಫ್ನ ಅರ್ಧ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಮತದಾನ ವೇಳೆ ಕಾನೂನು ಸುವ್ಯವಸ್ಥೆಗಾಗಿ 143 ಕೆಎಆರ್ಪಿ, 340 ಡಿಎಆರ್, ಸಿಎಆರ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…