ಕಲಬುರಗಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೋಟನೂರು(ಡಿ) ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಪ್ರಾದೇಶಿಕ ಕೇಂದ್ರ ಕಲಬುರಗಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಲಬುರಗಿ, ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಸುಸ್ಥಿರ ಮಣ್ಣು ಮತ್ತು ನೀರಿನ ಸಂರಕ್ಷಣೆಯ ಕ್ರಮಗಳು ಕುರಿತು ಒಂದು ದಿನz Àಕಾರ್ಯಾಗಾರವನ್ನು ಕಲಬುರಗಿ ಜಿಲ್ಲೆಯ ರೈತರಿಗೆ ಏರ್ಪಡಿಸಲಾಗಿತ್ತು.
ಕಾರ್ಯಾಗಾರವನ್ನು ಕಲಬುರಗಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಶ್ರೀಯುತ ಸಮದ್ ಪಟೇಲ್‍ರವರು ಉದ್ಘಾಟಿಸಿ, ಅತಿಯಾದ ಕೀಟನಾಶಕ, ರಸಗೊಬ್ಬರ, ಕಳೆನಾಶಕದ ಬಳಕೆಯಿಂದ ಮಣ್ಣಿನ ಗುಣಮಟ್ಟ ಹಾಳಾಗುತ್ತಿದೆ ಮತ್ತು ನೀರು ಕಲುಷಿತವಾಗುತ್ತಿದೆ. ಆದ್ದರಿಂದ ಸಾವಯವಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ಬಳಕೆ ಮಾಡಬೇಕೆಂದು ಹೇಳಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಮತ್ತು ಸಹಾಯಕ ಕೃಷಿ ನಿರ್ದೇಶಕರಾದ ಅನೀಲಕುಮಾರ ರಾಠೋಡ, ಅವರು ಪ್ರಾಸ್ತಾವಿಕ ಭಾಷಣ ಮಾಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಯೋಜನಾಅಭಿಯಂತರ ಡಾ:ಸೈಯದ್ ಸಮೀರರವರು ಕಡಿಮೆ ಕೀಟನಾಶಕ ಬಳಸಿ ಹೆಚ್ಚು ಇಳುವರಿ ಪಡೆಯುವ ತಂತ್ರಜ್ಞಾನಗಳ ಬಗ್ಗೆ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದಂತಹ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ:ಜಹೀರ್‍ಅಹ್ಮದ್‍ರವರು ಸಸ್ಯರೋಗಗಳ ಹತೋಟಿಯಲಿ ್ಲಜೈವಿಕ ನಿಯಂತ್ರಕಗಳ ಪಾತ್ರದ ಬಗ್ಗೆ ಮಾತನಾಡಿದರು.
ಉಪನ್ಯಾಸಕರಾಗಿ ಆಗಮಿಸಿದಂತಹ ಕಲಬುರಗಿಯ ಕೃಷಿ ಮಹಾವಿದ್ಯಾಲಯದ ಮಣ್ಣು ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ,.ಡಾ. ಎಮ್.ಎ. ಬೆಳ್ಳಕ್ಕಿಯವರು ಮಣ್ಣಿನ ಆರೋಗ್ಯ ನಿರ್ವಹಣೆ ಮತ್ತು ಮಣ್ಣು ನೀರಿನ ಪರೀಕ್ಷೆ ಬಗ್ಗೆ, ಕೃಷಿ ಅಧಿಕಾರಿಗಳಾದ ಯಾಸ್ಮೀನ್ ರವರು ಮಣ್ಣು ಮತ್ತು ನೀರು ಸಂರಕ್ಷಣೆ ವಿಧಾನಗಳ ಬಗ್ಗೆ ಉಪನ್ಯಾಸಕೊಟ್ಟರು. ಕೊನೆಯಲ್ಲಿ ಪ್ರಾದೇಶಿಕ ಕೇಂದ್ರ ಕಲಬುರಗಿಯತಾಂತ್ರಿಕ ಸಹಾಯಕರಾದ, ಅನೀಲಕುಮಾರ ಭಸ್ಮೆ ಅವರು ವಂದನಾರ್ಪಣೆ ಮಾಡಿದರು. ಕೃಷಿ ಅಧಿಕಾರಿಗಳಾದ ಶ್ರೀಮತಿ ಸುಜಾತ, ನೀಲ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…