ಬಿಸಿ ಬಿಸಿ ಸುದ್ದಿ

13 ವರ್ಷಗಳಿಂದ ತಲೆ ಮರೆಸಿಕೊಂಡ ಕೊಲೆ ಪ್ರಕರಣ ಆರೋಪಿಯ ಬಂಧನ

ಕಲಬುರಗಿ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ 13 ವರ್ಷಗಳ ಹಿಂದೆ ಕೊಲೆ ಮಾಡಿ ತಲೆ ಮರಿಸಿಕೊಂಡಿದ ಆರೋಪಿಯನ್ನು ಸೇಡಂ ತಾಲ್ಲೂಕಿನ ಮುಧೋಳ ಪೊಲೀಸ್‌ ಠಾಣೆಯ ಪಿಐ ದೌಲತ್‌ ಎನ್‌ ಕೆ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಕೊನೆಗೂ ಆರೋಪಿಯನ್ನು ಬಂಧಿಸುವಲಿ ಯಶಸ್ವಿಯಾಗಿದೆ.

ರಾಜೋಳ (ಕೆ)ಗ್ರಾಮದ ನಿವಾಸಿ ಶರಣಪ್ಪ ಮೊಗಲಪ್ಪ ಜಕ್ಕನಕೇರಿ (48), ಇತನು ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಇತನ ಪತ್ತೆಗಾಗಿ ಕಲಬುರಗಿ ಜಿಲ್ಲೆಯ ಪೊಲೀಸ್‌ ಅಧೀಕ್ಷಕರಾದ ಐಪಿಎಸ್‌ ಅಕ್ಷಯ ಹಾಕೆ , ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀನಿಧಿ,  ಚಿಂಚೋಳಿ ಉಪ ವಿಭಾಗ ಸಂಗಮನಾಥ ಎಸ್‌, ಹಿರೇಮಠ ರವರ ಮಾರ್ಗದರ್ಶನದಲ್ಲಿ ಮುಧೋಳ ಠಾಣೆಯ ಪಿಐ ದೌಲತ್‌ ಎನ್‌ ಕೆ ನೇತೃತ್ವದ ಸಿಬ್ಬಂದಿಗಳ ತಂಡದ ಹೆಚ್‌ ಸಿ ರಾಜಾಸಾಬ, ಮಲ್ಲಿಕಾರ್ಜುನ್‌ ಹಾಗೂ ಹುಸೇನ್‌ ಪಾಶ ತಲೆಮರೆಸಿಕೊಂಡಿದ್ದ ಆರೋಪಿತನ ಪತ್ತೆ ಮಾಡಿ 27 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ವಿವರ: 13.04.2011 ರಂದು ಇಲ್ಲಿನ ರಾಜೋಳ ಗ್ರಾಮದಲ್ಲಿ 27 ಜನ ಆರೋಪಿತರು ಲಕ್ಷ್ಮಪ್ಪ ಚಿನ್ನಯ್ಯ (52) ಮತ್ತು ನರಸಪ್ಪ ಚಿನ್ನಯ್ಯ (55) ಎಂಬುವವರನ್ನು ಕೊಲೆ ಮಾಡಿದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿತು. ಪ್ರಕರಣದಲ್ಲಿ ಭಾಗಿಯಾದ 6 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷ , 3 ಜನರಿಗೆ ಒಂದು ವರ್ಷ ಶಿಕ್ಷೆ ಹಾಗೂ 15,000 ರೂ ದಂಡ ವಿಧಿಸಿದ್ದು, ಇಬ್ಬರು ಆರೋಪಿತರು ವಿಚಾರಣೆ ಹಂತದಲ್ಲಿಯೇ ಮೃತಪಟ್ಟಿತ್ತಾರೆ. ಇನ್ನೂಳಿದ ಆರೋಪಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago