ಕಲಬುರಗಿ: ಜಿಲ್ಲೆ ಸೇಡಂ ತಾಲೂಕಿನ ಊಡಗಿ ಗ್ರಾಮದಲ್ಲಿ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಕೌಶಲ್ಯ ತರಬೇತಿ ನೀಡುವುದರ ಮೂಲಕ ಅವರನ್ನು ಜಾಗೃತರನ್ನಾಗಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರ ಅತ್ಯಾಚಾರ ತಡೆಗಟ್ಟಲು ಆತ್ಮ ರಕ್ಷಣೆ ಕಲೆಯನ್ನು ತಾಲೂಕಿನ 32 ಸರಕಾರಿ ಪ್ರೌಢ ಶಾಲೆಗಳಲ್ಲಿ ನಿರಂತರವಾಗಿ ಕರಾಟೆ ತರಬೇತಿಯನ್ನು ನೀಡಲಿದೆ ಎಂದು ತರಬೇತಿದಾರರಾದ ಬಸವರಾಜ್ ಕಾಳಗಿ ತಿಳಿಸಿದ್ದಾರೆ.
ಈ ಕೌಶಲ್ಯ ತರಬೇತಿಯಿಂದ ವಿದ್ಯಾರ್ಥಿನಿಯರು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕರಾಟೆಯನ್ನು ಬೆಳೆಸಬೇಕೆಂದು ಅರ್ಥೈಸಿದರೂ ಕರಾಟೆ ತರಬೇತಿ ನೀಡಿದರು ಸರಕಾರದಿಂದ ಮೂರು ಸಾವಿರ ಗೌರವ ಧನ ನೀಡುವುದರ ಮೂಲಕ ಪೆÇ್ರೀತ್ಸಾಹಿಸಿದೆ. ಈ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಭಾರತೀಯ ದೊಡ್ಡಮನಿ ಸೇರಿದಂತೆ ಶಿಕ್ಷಕ ವೃಂದದವರು, ವಿದ್ಯಾರ್ಥಿನಿಯರು, ತರಬೇತಿದಾರರಿಗೆ ಸನ್ಮಾನಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…