ಶಹಾಬಾದ: ಕಲಬುರಗಿ ಕಾಡಾ ಅಧ್ಯಕ್ಷರಾಗಿ ಶಹಾಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಶೀದ್ ಮರ್ಚಂಟ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸುಮಾರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಅವಿರತವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಎರಡು ದಶಕಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಡಾ.ರಶೀದ್ ಮರ್ಚಂಟ್ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಅಪ್ತರಾಗಿದ್ದು, ಈ ಭಾಗದಲ್ಲಿ ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬರಲು ಇವರ ಪ್ರಭಾವವೂ ಕಾರಣ.ಅಲ್ಲದೇ ಶಹಾಬಾದ ನಗರ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ. ಪಕ್ಷಕ್ಕೆ ಮಾಡಿದ ಸೇವೆಯನ್ನು ಗುರುತಿಸಿ ಈ ಹಿಂದೆ ಅವರಿಗೆ ಯುಪಿಎ ಸರಕಾರದ ಅವಧಿಯಲ್ಲಿ ಕೇಂದ್ರದ ಸರಕಾರದ ಮಿನಿಸ್ಟ್ರಿ ಆಫ್ ಸ್ಟೀಲ್ ಕನ್ಸ್ಯೂಮರ್‍ನ ಸದಸ್ಯರಾಗಿ ಹಾಗೂ ಕಲಬುರಗಿ ಜಯದೇವ ಹೃದೋಗ ಕೇಂದ್ರದ ಸದಸ್ಯರಾಗಿ ಪಕ್ಷ ನೇಮಕ ಮಾಡಿತ್ತು.
ಪಕ್ಷದ ಸಕ್ರೀಯ ಹಾಗೂ ನಿμÁ್ಟವಂತ ಕಾರ್ಯಕರ್ತರಾಗಿ ಪಕ್ಷದ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಅದ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಯನ್ನು ಗುರುತಿಸಿ ರಾಜ್ಯ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಡಾ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ತಾಲೂಕಿಗೊಂದು ಅವಕಾಶವನ್ನು ನೀಡಿದ್ದಾರೆ.
ಈ ಮೂಲಕ ಶಹಾಬಾದ ತಾಲೂಕಿಗೆ ಮೊಟ್ಟ ಮೊದಲ ಬಾರಿ ಕಾಡಾ ಅಧ್ಯಕ್ಷರ ಗರಿ ಡಾರಶೀದ ಅವರಿಗೆ ಒಲಿದು ಬಂದಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹರ್ಷದ ಮನೆಮಾಡಿದೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…