ಸುರಪುರ: ಶಾಸಕರು ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನ ನಮ್ಮ ಸುರಪುರ ಕ್ಷೇತ್ರಕ್ಕೆ ಬಹುದೊಡ್ಡ ನಷ್ಟವುಂಟಾಗಿದೆ ಎಂದು ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ್ ಮಾತನಾಡಿದರು.
ನಗರದ ಡಿಸಿಸಿ ಬ್ಯಾಂಕ್ ತಾಲೂಕು ಶಾಖೆಯಲ್ಲಿ ನಡೆದ ನುಡಿ-ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ರಾಜಾ ವೆಂಕಟಪ್ಪ ನಾಯಕ ಅವರು ಕಳೆದ ಮೂರು ದಶಕಗಳಿಂದ ಕ್ಷೇತ್ರದ ಅಭಿವೃಧ್ಧಿಗೆ ಶ್ರಮಿಸಿದವರು,ಅವರು ಎಂದೂ ಕೊಟ್ಟ ಮಾತನ್ನು ತಪ್ಪದ ಮಹಾನ್ ವ್ಯಕ್ತಿಯಾಗಿದ್ದು,ಇಂದು ಅವರನ್ನು ಕಳೆದುಕೊಂಡು ಎಲ್ಲರು ದುಖಃ ಪಡುವಂತಾಗಿದೆ.ಕ್ಷೇತ್ರದಲ್ಲಿನ ಶಾಲೆ,ರಸ್ತೆ,ಕುಡಿಯುವ ನೀರು,ಕೃಷಿ ಹೀಗೆ ಎಲ್ಲಾ ರಂಗಗಳ ಅಭೀವೃಧ್ಧಿಗೆ ಸದಕಾಲ ಶ್ರಮಿಸಿದ ಮಹಾನ್ ಚೇತನರು ಇಂದು ನಮ್ಮೆಲ್ಲರನ್ನು ಅಗಲಿದ್ದಾರೆ.ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸದಾಕಾಲ ಎಲ್ಲರು ಪ್ರಾರ್ಥಿಸೋಣ ಎಂದರು.
ಸಭೆಯ ಆರಂಭದಲ್ಲಿ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಮೇಣದ ಬತ್ತಿಯನ್ನು ಬೆಳಗಿ ಎರಡು ನಿಮಿಷಗಳ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.ಈ ಸಂದರ್ಭದಲ್ಲಿ ಬ್ಯಾಂಕ್ ಡಿಸಿಸಿ ಬ್ಯಾಂಕ್ ತಾಲೂಕು ಶಾಖೆ ವ್ಯವಸ್ಥಾಪಕರಾದ ಬಸವರಾಜ ಕುಂಬಾರ ಹಾಗೂ ತಾಲೂಕಿನ ವಿವಿಧ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರು ಭಾಗವಹಿಸಿ ನುಡಿ-ನಮನ ಸಲ್ಲಿಸಿದರು.
ಸಭೆಯಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಶಿವರುದ್ರ ಉಳ್ಳಿ ಸತ್ಯಂಪೇಟೆ,ವಿವಿಧ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಕಾರ್ಯದರ್ಶಿಗಳಾದ ಮಲ್ಲು ಬಾದ್ಯಾಪುರ,ಬಲಭೀಮ ಮಾಲಗತ್ತಿ,ಜಗದೀಶ ಸೂಗುರ,ಖಾನಾಪುರ ಯೂನಿಯನ್ ಕಾರ್ಯದರ್ಶಿ ಬಸವರಾಜ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…