ಬಿಸಿ ಬಿಸಿ ಸುದ್ದಿ

ಆಳಂದ; ಬಿ.ಆರ್ ಪಾಟೀಲ ಗೆದ್ದಾಗಿನಿಂದ ದ್ವೇಷದ ರಾಜಕಾರಣ

ಆಳಂದ; ಬಿ ಆರ್ ಪಾಟೀಲ ಗೆದ್ದಾಗಿನಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಅಲ್ಲದೇ ತಾಲೂಕಿನಲ್ಲಿ ಕೊಲೆ, ಸುಲಿಗೆ, ಅತ್ಯಾಚಾರದಂತಹ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿವೆ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಆರೋಪಿಸಿದ್ದಾರೆ.

ಶನಿವಾರ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಭಾರತೀಯ ಜನತಾ ಪಕ್ಷದ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಬೃಹತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಮಹಾಂತಪ್ಪ ಆಲೂರೆಯವರು ದಿ. 29ನೇ ಫೆಬ್ರುವರಿ 2024ರಂದು ಬೆಳಿಗ್ಗೆ ಸಮಯದಲ್ಲಿ ಹೊಲದಿಂದ ಬರುವಾಗ ಅಪರಿಚಿತ ದುಷ್ಕರ್ಮಿಗಳಿಂದ ಭಯಾನಕವಾಗಿ ಕೊಲೆಯಾಗಿರುತ್ತಾರೆ. ಮಹಾಂತಪ್ಪ ಆಲೂರೆಯವರು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾಗಿದ್ದರು ಅಲ್ಲದೇ ಕಲಬುರಗಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಗ್ರಾಮಾಂತರ ಘಟಕದ ಮಾಜಿ ಉಪಾಧ್ಯಕ್ಷರಾಗಿದ್ದರು. ಇವರ ಕೊಲೆಯ ಹಿಂದೆ ಒಂದು ಷಡ್ಯಂತ್ರ ಇರುವುದು ಮೇಲ್ನೊಟಕ್ಕೆ ಕಂಡು ಬರುತ್ತದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಗುರಿಯಾಗಿಸಿಕೊಂಡು ಕೊಲೆ ಮಾಡಲಾಗುತ್ತಿದೆ. ಮಾತು ಮಾತಿಗೂ ಭಾಷಣ ಬಿಗಿಯುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವೆರಿಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆಗಳ ಬಗ್ಗೆ ತಿಳಿಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ ಅವರು ಕೊಲೆಯ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಇಲ್ಲದಿದರೇ ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯವ್ಯಾಪಿ ಹೋರಾಟವನ್ನು ರೂಪಿಸಲಾಗುವುದು. ತಾಲೂಕಿನಲ್ಲಿ ಹಾಡುಹಗಲೇ ನಡೆಯುತ್ತಿರುವ ಘಟನೆಗಳು ಸಾಮಾನ್ಯ ಜನರನ್ನು ಬೆಚ್ಚಿ ಬಿಳಿಸಿವೆ ಅಲ್ಲದೇ ಪೊಲೀಸ್ ಅಧಿಕಾರಿಗಳು ಸರ್ಕಾರದ, ಶಾಸಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.

ಮಹಾಂತಪ್ಪ ಆಲೂರೆಯವರ ಕುಟುಂಬದ ಜೊತೆ ಭಾರತೀಯ ಜನತಾ ಪಕ್ಷ ಮತ್ತು ಕಾರ್ಯಕರ್ತರು ನಿಲ್ಲಲಿದ್ದಾರೆ. ಸರ್ಕಾರಕ್ಕೆ ನಿಜವಾಗಿಯೂ ಕಾಳಜಿ ಇದ್ದರೇ ಈ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಅದಾಗಲೇ ಪೊಲೀಸ್ ಇಲಾಖೆಯ ಮೇಲೆ ಜನರಿಗೆ ನಂಬಿಕೆ ಬರಲು ಸಾಧ್ಯ ಎಂದರು.

ಬಿಜೆಪಿ ವಿಭಾಗೀಯ ಸಂಘಟನಾ ಪ್ರ. ಕಾರ್ಯದರ್ಶಿ ಅರುಣ ಬಿನ್ನಾಡಿ ಮಾತನಾಡಿ, ಮಹಾಂತಪ್ಪ ಆಲೂರೆಯವರ ಕೊಲೆಯ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಅಲ್ಲದೇ ಮನೆಯ ಯಜಮಾನನನ್ನು ಕಳೆದುಕೊಂಡು ಅನಾಥವಾಗಿರುವ ಅವರ ಕುಟುಂಬದವರಿಗೆ 50 ಲಕ್ಷ ರೂ. ಪರಿಹಾರ ಧನ ನೀಡಬೇಕು. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸುಮ್ಮನೆ ಕೂಡುವ ಜಾಯಮಾನದವರಲ್ಲ ಅವರನ್ನು ಕೆಣಕಿದರೇ ಪರಿಸ್ಥಿತಿನ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಸಿದರು.

ಆಳಂದ ಶಾಸಕ ಬಿ ಆರ್ ಪಾಟೀಲ ಗಾಂಧಿ ಟೋಪಿ ಹಾಕಿರುವ ನಕಲಿ ಗಾಂಧಿವಾದಿ. ಅವರೊಬ್ಬ ಮುಖವಾಡ ಧರಿಸಿರುವ ರಾಜಕಾರಣಿಯಾಗಿದ್ದಾರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಹಾಗೂ ಕೊಲೆಗಡುಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವಿಠ್ಠಲರಾವ ಪಾಟೀಲ, ಬಸವರಾಜ ಬಿರಾದಾರ, ಹಣಮಂತ ಕಾಬಡೆ, ಶರಣಗೌಡ ಪಾಟೀಲ ದೇವಂತಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹಣಮಂತರಾವ ಮಾಲಾಜಿ, ಮಲ್ಲಣ್ಣ ನಾಗುರೆ, ಚಂದ್ರಕಾಂತ ಭೂಸನೂರ, ಆನಂದರಾಯ ಗಾಯಕವಾಡ, ಮಲ್ಲಿಕಾರ್ಜುನ ತಡಕಲ, ಲಿಂಗರಾಜ ಪಾಟೀಲ ಝಳಕಿ, ರುದ್ರಯ್ಯ ಹಿರೇಮಠ, ಯಶ್ವಂತರಾವ ಪಾಟೀಲ, ಪ್ರಭು ಸರಸಂಬಿ, ಪ್ರಭಾಕರ ರಾಮಜಿ, ಸೋಮನಾಥ ಹತ್ತರಕಿ, ಶಿವಪುತ್ರ ನಡಗೇರಿ, ಆದಿನಾಥ ಹೀರಾ, ಕಲ್ಯಾಣಿ ದೊಡ್ಡಮನಿ, ಆಕಾಶ ದೇಗಾಂವ, ರವಿ ನಾಯಕ, ಜಗನ್ನಾಥ ಹೊಸಕುರುಬ, ಶ್ರೀಧರ ಕೊಟ್ಟರಗಿ, ಅಶೋಕ ಹೊಸಮನಿ, ಶರಣಪ್ಪ ಹೊಸಮನಿ, ಶಿವಪ್ಪ ಘಂಟೆ, ರಘುನಾಥ ಪಾಟೀಲ, ಕುಮಾರ ಬಂಡೆ, ಸಚೀನ ಬಿರಾದಾರ, ಪ್ರಕಾಶ ತೋಳೆ, ತಿಪ್ಪಣ್ಣ ಬಂಡೆ, ಶರಣಬಸಪ್ಪ ಬಿರಾದಾರ, ತಿಪ್ಪಯ್ಯ ಗುತ್ತೇದಾರ, ಶಿವಪ್ರಕಾಶ ಹೀರಾ, ಸಿದ್ದು ಪಾಟೀಲ ಶಕಾಪೂರ, ರಾಮ ಪಾಟೀಲ ಖಂಡಾಳ, ಶಿವರಾಜ ಅವರಳ್ಳಿ, ಪ್ರಫುಲ ಬಾಬಳಸೂರೆ, ಮಹೇಶ ಪಾಟೀಲ, ಭೀಮಾಶಂಕರ ಕಲಶೆಟ್ಟಿ ಸೇರಿದಂತೆ ತಾಲೂಕಿನ ಭಾರತೀಯ ಜನತಾ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸ್ಥಳಕ್ಕೆ ಆಗಮಿಸಿದ್ದ ಆಳಂದ ತಹಸೀಲದಾರ ಸುರೇಶ ಅಂಕಲಗಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಆಳಂದ ಪಿಐ ಮಹಾದೇವ ಪಂಚಮುಖಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago