ವಾಡಿ; ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಬಾಲ ವಿಕಾಸ ಮಂದಿರದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಯೋಗಾಭ್ಯಾಸ ಮಾಡಿಸಿದರು.
ಪ್ರತಿನಿತ್ಯ ಯೋಗಾಭ್ಯಾಸಗಳನ್ನು ಮಾಡುವವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರುವುದಿಲ್ಲ ಎಂಬುದು ಎಷ್ಟು ಸತ್ಯವೋ, ಮಾನಸಿಕ ಆರೋಗ್ಯ ಕೂಡ ಸ್ಥಿರವಾಗಿ ಇರುತ್ತದೆ ಎಂಬುದು ಅಷ್ಟೇ ಸತ್ಯ. ಇದನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ ಎಂದು ಯೋಗಾಭ್ಯಾಸ ಮಾಡಿಸುತ್ತಾ ವೀರಣ್ಣ ಯಾರಿ ಹೇಳಿದರು.
ಈಗಿನ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ದೈಹಿಕ ಬೆಳವಣಿಗೆಗೆ ಸಹಕಾರಿ ಯಾದ ಆಟಗಳಲ್ಲಿ ತೊಡಗಿದಾಗ ಮಾತ್ರ ಸದೃಢ ಆರೋಗ್ಯವಂತ ದೇಶ ನಿರ್ಮಾಣ ಸಾಧ್ಯ, ಚಿಕ್ಕ ವಯಸ್ಸಿನಲ್ಲಿ ಯೋಗ ಪಾಠ ಕಲಿಯುವುದರಿಂದ ಮಿದಳು, ಕಣ್ಣು ಸೇರಿದಂತೆ ಇತ್ಯಾದಿ ಸೂಕ್ಷ್ಮಅಂಗಗಳು ಚುರುಕುಗೊಳ್ಳತ್ತವೆ ಈ ರೀತಿ ವಿದ್ಯಾರ್ಥಿಗಳಿಗೆ ಯೋಗ ಹಲವು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಕಲ್ಲೂರ, ಶಿವಕುಮಾರ ಮಲ್ಕಂಡಿ, ನಾಗರಾಜ ತಳವಾರ, ಶಿವಕುಮಾರ ಕೊಳಿ,ಸಂತೋಷ ಕುಮಾರ ಪಾಟೀಲ,ಜಿ ಅನಿತಾ,ಚಂದ್ರಕಲಾ ಶೆಳ್ಳಗಿ, ಪದ್ಮಾವತಿ ಕುಲಕರ್ಣಿ, ಕವಿತಾ ಪಾಟೀಲ ಸೇರಿದಂತೆ ಶಿಕ್ಷಕ ವೃಂದದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…