ಚಿತ್ತಾಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಬಗೆಯ ಅಂಗವಿಕಲತೆ ಕುರಿತು ತಪಾಸಣೆ ನಡೆಸಿದ ದಿವಸವೇ ಅಂಗವಿಕಲರಿಗೆ ಯುಡಿಐಡಿ ಗುರುತಿನ ಕಾರ್ಡ್ ವಿತರಣೆ ಮಾಡಬೇಕು ಎಂದು ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹ್ಮದ್ ಇಬ್ರಾಹೀಂ ಮನವಿ ಮಾಡಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಅಂಗವಿಕಲರ ಗುರುತಿನ ಚೀಟಿಗಾಗಿ ತಪಾಸಣೆ ನಡೆಯುವ ದಿವಸವೇ ಯುಡಿಐಡಿ ಕಾರ್ಡ್ ವಿತರಿಸಬೇಕು ಎಂದು ಆದೇಶ ಇದೆ ಅದು ಪಾಲನೆಯಾಗುತ್ತಿಲ್ಲ. ಆನ್‌ಲೈನ್ ಮೂಲಕವೂ ಯುಡಿಐಡಿ ಕಾರ್ಡ್ ಬರುತ್ತಿಲ್ಲ. ಹೀಗಾಗಿ ಅಂಗವಿಕಲರಿಗೆ ಸರ್ಕಾರದ ಸೌಲಭ್ಯ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಅವರು ದೂರಿದ್ದಾರೆ.
ಯುಡಿಐಡಿ ಗುರುತಿನ ಕಾರ್ಡ್ ವಿತರಣೆ ಕೆಲಸಕ್ಕಾಗಿ ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಬೇಕು. ಖಾಸಗಿ ಆಪರೇಟರ್ ಇರುವುದರಿಂದ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರನ್ನು ತೆಗೆದು ಕಾಯಂ ಸಿಬ್ಬಂದಿ ನೇಮಿಸಬೇಕು. ವಿವಿಧ ಬಗೆಯ ಅಂಗವೈಕಲ್ಯ ಹೊಂದಿರುವವರು ಕಾರ್ಡ್ ಪಡೆಯಲು ಸಮಸ್ಯೆ ಅನುಭವಿಸುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…