ಕಲಬುರಗಿ: ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರು ಕೂಡಾ ನಮ್ಮ ನೆರೆ-ಹೊರೆ ರಾಷ್ಟ್ರಗಳಲ್ಲಿ ಇನ್ನೂ ಕಂಡುಬರುತ್ತಿರುವುದರಿಂದ ಅದು ವೈರಸ್ ನಮ್ಮ ದೇಶಕ್ಕೆ ತಗುಲಬಾರದೆಂದು ಮುಂಜಾಗ್ರತೆಯಾಗಿ ಪೋಲಿಯೋ ಹನಿಯನ್ನು ಹಾಕಲಾಗುತ್ತಿದೆ. ಐದು ವರ್ಷಗಳೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿಯನ್ನು ಹಾಕಿಸುವ ಮೂಲಕ ಪೋಲಿಯೋ ರೋಗ ಬರದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಾಲೂಕಾ ಆರೋಗ್ಯ ಮೇಲ್ವಿಚಾರಕ ಪುಂಡಲಿಕ ಗಂಜಿ ಹೇಳಿದರು. ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಹೇಳಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರ ‘ನಗರ ಪ್ರಾಥಮಿಕ ಆರೋಗ್ಯ ಕೇಂದ’್ರದ ಆವರಣದಲ್ಲಿ ಶನಿವಾರ ಜರುಗಿದ ಪೋಲಿಯೋ ಅಭಿಯಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಯುಪಿಎಚ್‍ಸಿಯ ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಮಾತನಾಡಿ, ಪೋಲಿಯೋ ಎಂಬುದು ವೈರಾಣುವಿನಿಂದ ಉಂಟಾಗುವ, ಗಂಭೀರ ಸಾಂಕ್ರಾಮಿಕ ಕಾಯಿಲೆಯಾಗಿದೆ. ಮಕ್ಕಳನ್ನು ಕಾಡುವು ಈ ಕಾಯಿಲೆಯು, ಜ್ವರ, ಸುಸ್ತು, ವಾಂತಿ, ತಲೆನೋವು, ಸ್ನಾಯು ಸೆಟೆದುಕೊಳ್ಳುವ ಲಕ್ಷಣಗಳನ್ನು ಹೊಂದಿದೆ. ಪ್ರತಿ 200 ಪ್ರಕರಣಗಳಲ್ಲಿ ಒಂದು ಪ್ರಕರಣವು ಶಾಶ್ವತ ಅಂಗವೈಕಲ್ಯಕ್ಕೆ ಎಡೆಮಾಡಿಕೊಡುವದರಿಂದ ನಿರ್ಲಕ್ಷ ಮಾಡುವುದು ಬೇಡವೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ಬಸಯ್ಯಸ್ವಾಮಿ ಹೊದಲೂರ, ಶಿವಯೋಗೆಪ್ಪಾ ಎಸ್.ಬಿರಾದಾರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಗಂಗಾಜ್ಯೋತಿ ಗಂಜಿ, ರೇಷ್ಮಾ ನಕ್ಕುಂದಿ, ಸಂಗಮ್ಮ ಅತನೂರ್, ಮಂಗಲಾ ಚಂದಾಪುರೆ, ಚಂದ್ರಕಲಾ ಮಠಪತಿ, ಚಂದಮ್ಮ ಮರಾಠಾ, ಅರ್ಚನಾ ಸಿಂಗೆ, ನಾಗಮ್ಮ ಚಿಂಚೋಳಿ ಸೇರಿದಂತೆ ಮತ್ತಿತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…