ಬಿಸಿ ಬಿಸಿ ಸುದ್ದಿ

ರಸ್ತೆ ಸುರಕ್ಷತಾ ಉಪಕ್ರಮ ಅನುಷ್ಠಾನಗೊಳಿಸಿದ್ದಕ್ಕಾಗಿ ಕ.ಕ.ರ.ಸಾ. ನಿಗಮಕ್ಕೆ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ರಸ್ತೆ ಸುರಕ್ಷತಾ ಉಪಕ್ರಮಗಳನ್ನು ಅನುಷ್ಠಾನಗೊಳಿಸಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ರಾಷ್ಟ್ರೀಯ ರಸ್ತೆ ಸಾರಿಗೆಗಳ ನಿಗಮದ ಒಕ್ಕೂಟ(ASRTU) ವು ರಾಷ್ಟ್ರೀಯ ಮಟ್ಟದ Best Road Safety practices ವಿಭಾಗದಡಿ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ್ದು, ಇದೇ ಮಾರ್ಚ್ 15 ರಂದು ನವದೆಹಲಿಯಲ್ಲಿ ಜರುಗಲಿರುವ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟದ 64ನೇ ವಾರ್ಷಿಕ ಸಮಾವೇಶದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ ಅವರು ತಿಳಿಸಿದ್ದಾರೆ.

ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ನಿಗಮದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರ ಮಾರ್ಗದರ್ಶನ ಹಾಗೂ ನಿಗಮದ ಎಲ್ಲ್ಲಾ ಸಿಬ್ಬಂದಿ, ಅಧಿಕಾರಿಗಳ ಸಂಯೋಜಿತ ಯೋಜನೆ ಮತ್ತು ಪರಿಶ್ರಮದಿಂದ ನಿಗಮಕ್ಕೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಬಂದಿರುವುದಕ್ಕೆ ನಿಗಮದ ಎಲ್ಲ ವರ್ಗದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರಿಗೆ ವ್ಯವಸ್ಥಿತ ಮತ್ತು ಸುರಕ್ಷಿತ ಬಸ್ ಸೇವ ಒದಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2022-23ನೇ ಸಾಲಿನಲ್ಲಿ ನಿಗಮದಲ್ಲಿ ಒಂದು ಹೈಟೆಕ್ ಮಾದರಿಯ ಸಂಚಾರಿ ತರಬೇತಿ (Mobile conference Training Bus) ವಾಹನವನ್ನು ಜಿಲ್ಲಾಡಳಿತದಿಂದ ಪಡೆದು ಈ ವಾಹನದಲ್ಲಿ ಚಾಲಕರಿಗೆ ರಸ್ತೆ ಸುರಕ್ಷತೆ ನಿಯಮಗಳ ಕುರಿತು ಈ ವಾಹನವನ್ನು ನಿಗಮದ 09 ವಿಭಾಗಗಳ ವ್ಯಾಪ್ತಿಯಲ್ಲಿ ಬರುವ 52 ಘಟಕಗಳಿಗೆ ತೆಗೆದುಕೊಂಡು ಹೋಗಿ ತರಬೇತಿಯನ್ನು ನೀಡಲಾಗುತ್ತಿದೆ.

ಈ ಸಂಚಾರಿ ತರಬೇತಿ (Mobile conference Training Bus) ವಾಹನದ ವೈಶಿಷ್ಟತೆಗಳು: ಈ ಸಂಚಾರಿ ತರಬೇತಿ ಬಸ್‍ನಲ್ಲಿ ಸಂಪೂರ್ಣ ಹವಾ ನಿಯಂತ್ರಿತ ವ್ಯವಸ್ಥೆ ಇದ್ದು, ಒಟ್ಟು 16 ಆಸನಗಳ ವ್ಯವಸ್ಥೆ, ಎಲ್.ಇ.ಡಿ ಸ್ಕ್ರಿನ್ ಹಾಗೂ ಆಡಿಯೋ ಸಿಸ್ಟಮ್ ವ್ಯವಸ್ಥೆ ಇರುತ್ತದೆ. ಈ ಸಂಚಾರಿ ತರಬೇತಿ ವಾಹನವನ್ನು ಘಟಕಗಳಿಗೆ ತೆಗೆದುಕೊಂಡ ಹೋಗಿ 2022-23 ನೇ ಸಾಲಿನಲ್ಲಿ ಒಟ್ಟು 6,583 ಚಾಲಕರಿಗೆ ತರಬೇತಿಯನ್ನು ನೀಡಲಾಗಿದೆ. ಇದರಿಂದ ನಿಗಮಕ್ಕೆ ಸರಾಸರಿ 2 ಕೋಟಿ ರೂ. ಗಳ ಉಳಿತಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago