ಬಿಸಿ ಬಿಸಿ ಸುದ್ದಿ

ಮಾರ್ಚ್ 6 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಮಾರ್ಚ್ 6 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಟ್ಯಾಲಿ ಸಲ್ಯೂಷನ್‍ದಲ್ಲಿ ಬಿಜಿನೆಸ್ ಕನ್ಸಲ್ಟೆಂಟ್ ಹಾಗೂ ಟೆಲಿಕಾಲರ್ಸ್ ಹುದ್ದೆಗಳಿಗೆ ಪಿಯುಸಿ, ಬಿಬಿಎ, ಬಿ.ಕಾಂ, ಬಿಬಿಎಮ್, ಎಮ್‍ಬಿಎ, ಎಮ್.ಕಾಂ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಫ್ಲಿಪ್‍ಕಾರ್ಟ್‍ದಲ್ಲಿ ಡೆಲೆವರಿ ಎಕ್ಸಿಕ್ಯೊಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಐಟಿಐ, ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಡೇರಿಂಗ್ ಐ ಸೆಕ್ಯೊರಿಟಿ ಆಂಡ್ ಹೆಚ್‍ಆರ್ ಸರ್ವೀಸಸ್ ಪ್ರೈ.ಲಿ. ದಲ್ಲಿ ಸೆಕ್ಯೊರಿಟಿ ಗಾರ್ಡ್ ಮತ್ತು ಹೌಸ್ ಕೀಪಿಂಗ್ ಹುದ್ದೆಗೆ 7ನೇ ತರಗತಿಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಮುತ್ತೂಟ್ ಫೈನಾನ್ಸ್‍ದಲ್ಲಿ ಇನ್‍ಟರ್ನ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಹಾಗೂ ಪ್ರೋಬೆಷನರಿ ಆಫೀಸರ್ ಹುದ್ದೆಗೆ ಎಮ್‍ಬಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 30 ವರ್ಷದೊಳಗಿರಬೇಕು.

ಕಿಯಾ ಮೋಟಾರ್ಸ್‍ದಲ್ಲಿ ಕಸ್ಟ್‍ಮರ ಕೇರ್ ಎಕ್ಸಿಕ್ಯೂಟಿವ್/ಮ್ಯಾನೇಜರ್, ಸೇಲ್ಸ್ ಮ್ಯಾನೇಜರ್, ಸೇಲ್ಸ್ ಕನ್ಸ್‍ಲ್ಟೆಂಟ್, ಜನರಲ್ ಮ್ಯಾನೇಜರ್ ಸರ್ವಿಸ್ ಹುದ್ದೆಗಳಿಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್‍ಆರ್ ಎಕ್ಸಿಕ್ಯೂಟಿವ್ ಹುದ್ದೆಗೆ ಎಮ್‍ಬಿಎ, ಫೈನಾನ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಬಿ.ಕಾಂ, ಎಮ್.ಕಾಂ., ಸರ್ವಿಸ್ ಮ್ಯಾನೇಜರ್/ಸರ್ವಿಸ್ ಅಡ್ವೈಜರ್ ಹುದ್ದೆಗೆ ಬಿಇ, ಬಿ.ಟೇಕ್,ಐಟಿಐ, ಡಿಪ್ಲೋಮಾ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಟೆಕ್ನಿಶಿಯನ್ ಹುದ್ದೆಗೆ ಐಟಿಐ (ಯಾವುದೇ ಟ್ರೇಡ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ವಿದ್ಯಾರ್ಹತೆಯ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆÀಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲ್ಲಿ ಭಾಗವಹಿಸಬಹುದಾಗಿದೆ.
ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago