ಬಿಸಿ ಬಿಸಿ ಸುದ್ದಿ

ಕಲಬುರಗಿ ಕಾಡಾ ಅಧ್ಯಕ್ಷರಾಗಿ ನೇಮಕಗೊಂಡ ಡಾ.ರಶೀದ್‍ಗೆ ಸನ್ಮಾನ

ಶಹಾಬಾದ: ಕಲಬುರಗಿ ಕಾಡಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಾ.ರಶೀದ್ ಮರ್ಚಂಟ್ ಅವರನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ ಚವ್ಹಾಣ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಇವರು ಇಲ್ಲಿನ ಯಾವುದೇ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯಲು ಮುಖ್ಯ ಕಾರಣೀಭೂತರಾಗಿದ್ದಾರೆ. ವೃತ್ತಿಯಿಂದ ವೈದ್ಯಾರಗಿರುವ ಇವರು ನಗರದಲ್ಲಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ತಮ್ಮ ಛಾಪನ್ನು ಮೂಡಿಸಿರುವ ಏಕೈಕ ವ್ಯಕ್ತಿ ಡಾ.ರಶೀದ್ ಮರ್ಚಂಟ. ತಾಲೂಕಿನಲ್ಲಿಯೇ ಅವರದೇ ಆದ ಖದರ್, ವ್ಯಕ್ತಿತ್ವ ಹೊಂದಿದ್ದು ಅದರಿಂದಲೇ ಹೆಸರುವಾಸಿಯಾಗಿದ್ದಾರೆ. ಬಡ ರೋಗಿಗಳಿಗೆ ಉಚಿತ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಆಸ್ಪತ್ರೆ ಬಾಗಿಲನ್ನು ಹಾಕದೇ ಸಾವಿರಾರು ರೋಗಿಗಳಿಗೆ ಉತ್ತಮ ಸೇವೆ ನೀಡಿದ್ದ ಹೆಗ್ಗಳಿಕೆ ಇವರದ್ದು. ಬಡ ರೋಗಿಗಳ ಪಾಲಿನ ದೇವರಾಗಿದ್ದಾರೆ.

‘ಸಾಧನೆ ಇಲ್ಲದೇ ಸತ್ತರೇ ಸಾವಿಗೆ ಅವಮಾನ , ಆದರ್ಶವಿಲ್ಲದೇ ಸತ್ತರೇ ಬದುಕಿಗೆ ಅವಮಾನ’ ಎಂಬಂತೆ ದೃಢ ಸಂಕಲ್ಪದಿಂದ ಯಾರಿಗೆ ಯಾವ ಸಮಯದಲ್ಲಿ ಕಷ್ಟಗಳಿಗೆ ಅಂಜದೇ ಸಮಾಜದ ಎಲ್ಲಾ ವರ್ಗದವರಿಗೂ ಚಿಕಿತ್ಸೆ ನೀಡಿದ ಬಡವರ ಪಾಲಿನ ಸಂಜೀವಿನಿ ಡಾಕ್ಟರ್ ಅಂತಾನೇ ಕರೆಯಲಾಗುತ್ತದೆ.ಇಂತಹ ವ್ಯಕ್ತಿಗೆ ಕಾಡಾ ಅಧ್ಯಕ್ಷರನ್ನಾಗಿ ಮಾಡಿದ ರಾಷ್ಟ್ರೀ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ,ಸಚಿವ ಶರಣ ಪ್ರಕಾಶ ಪಾಟೀಲ ಹಾಗೂ ಇತರ ಶಾಸಕರಿಗೆ ಅಭಿನಂದಿಸುತ್ತೆನೆ ಎಂದರು.

ಮುಖಂಡ ಮುನ್ನಾ ಪಟೇಲ್ ಮಾತನಾಡಿ,ಸರಳತೆ ಹಾಗೂ ಪಕ್ಷದ ನಿಷ್ಠೆಗೆ ಕಾಡಾ ಅಧ್ಯಕ್ಷ ಸ್ಥಾನ ಡಾ.ರಶೀದ್ ಅವರಿಗೆ ಲಭಿಸಿರುವುದು ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ವಿಜಯಕುಮಾರ ಚವ್ಹಾಣ, ಸತೀಶ ಚವ್ಹಾಣ,ಆಮೀರ ಮರ್ಚಂಟ್,ಅಜಯ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago