ಸುರಪುರ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಒಟ್ಟು 234 ಬೂತ್‍ಗಳ ಮೂಲಕ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ತಿಳಿಸಿದರು.
ನಗರದ ರಂಗಂಪೇಟೆಯ ಹನುಮಾನ ದೇವಸ್ಥಾನದ ಆವರಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಎರಡೂ ತಾಲೂಕಿನಲ್ಲಿ ಒಟ್ಟು 57073 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.ಎಲ್ಲಾ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಪೋಲಿಯೋ ಬೂತ್‍ಗೆ ಕರೆದುಕೊಂಡು ಬಂದು ಪೋಲಿಯೋ ಹನಿಯನ್ನು ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತ ಮಾಡಲು ಎಲ್ಲರು ಮುಂದಾಹಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ತಹಸಿಲ್ದಾರ್ ಕೆ.ವಿಜಯಕುಮಾರ್ ಅವರು ಮಗುವಿಗೆ ಪೋಲಿಯೋ ಹನಿಯನ್ನು ಹಾಕುವ ಮೂಲಕ ಚಾಲನೆ ನೀಡಿದರು,ಈ ಸಂದರ್ಭದಲ್ಲಿ ಮಾತನಾಡಿ,ಪಕ್ಕದ ಪಾಕಿಸ್ತಾನದಲ್ಲಿ ಇನ್ನೂ ಕೆಲವು ಮಕ್ಕಳು ಪೋಲಿಯೋ ದಿಂದ ಬಳಲುತ್ತಿವೆ ಎನ್ನುವುದು ನೋಡಿದಾಗ,ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣ ಇಲ್ಲ ಎನ್ನುವುದು ಸಂತೋಷದ ಸಂಗತಿಯಾಗಿದೆ,ಪೋಲಿಯೋ ಮುಕ್ತ ಭಾರತಕ್ಕಾಗಿ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಕೊಡಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮುಖಂಡರ ಪ್ರೇಮ್ ಮಹೇಂದ್ರಕರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುರಪುರ ಹಾಗೂ ಹುಣಸಗಿ ತಾಲೂಕಿನಲ್ಲಿ 57073 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು,ಅದರಲ್ಲಿ 53505 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಪ್ರತಿಶತ 93.74 ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದ್ದು,ಇನ್ನುಳಿದ ಮಕ್ಕಳಿಗೂ 6ನೇ ತಾರಿಖಿನ ಒಳಗಾಗಿ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲಾಗುವುದು- ಡಾ:ಆರ್.ವಿ ನಾಯಕ ಟಿಹೆಚ್‍ಓ ಸುರಪುರ
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಸರಕಾರದ ಹೆಚ್ಚುವರಿ ನಿರ್ದೇಶಕರಾದ ಡಾ:ತ್ರಿವೇಣಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ:ಪ್ರವೀಣ ಪಾಟೀಲ್,ಆರ್.ಸಿ.ಹೆಚ್.ಓ ಡಾ:ಮಲ್ಲಪ್ಪ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರು ತಾಲೂಕಿನಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ವೀಕ್ಷಿಸಿದರು.