ಸುರಪುರ: ನಗರದರ ರಂಗಂಪೇಟೆಯಲ್ಲಿನ ಕುಂಬಾರ ಭವನದಲ್ಲಿ ಇತ್ತೀಚೆಗೆ ನಿಧನರಾದ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರು ಹಾಗು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸುರಪುರ ತಾಲೂಕು ಕುಂಬಾರ ಸಂಘದ ನೇತೃತ್ವದಲ್ಲಿ ಶ್ರದ್ಧಾಂಜಲಿ ಹಾಗೂ ನುಡಿ-ನಮನ ಕಾರ್ಯಕ್ರಮ ನಡೆಸಲಾಗಿದೆ.ಕಾರ್ಯಕ್ರಮದ ಆರಂಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಎರಡು ನಿಮಿಷಗಳ ಮೌನಾಚರಣೆ ನಡೆಸುವ ಮೂಲಕ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಎಲ್ಲಾ ಜಾತಿ ಜನಾಂಗಗಳ ಸರ್ವಾಂಗೀಣ ಅಭಿವೃಧ್ಧಿಗಾಗಿ ಶ್ರಮಿಸಿದ ನಾಯಕರಾಗಿದ್ದಾರೆ.ಅವರು ಕುಂಬಾರ ಸಮುದಾಯದ ಏಳಿಗೆಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ,ಇಂದು ಈ ಕಾರ್ಯಕ್ರಮ ಮಾಡುತ್ತಿರುವ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನವನ್ನು ಅವರೆ ನೀಡಿದ್ದಾರೆ.
ಕುಂಬಾರಿಕೆ ವೃತ್ತಿ ಮಾಡಲು ಅನೇಕರು ಅಡ್ಡಿ ಪಡಿಸುವಾಗ ಸ್ವತಃ ತಾವೇ ಈ ಸ್ಥಳಕ್ಕೆ ಆಗಮಿಸಿ ಇಲ್ಲಿ ನಿಮ್ಮ ವೃತ್ತಿಯನ್ನು ಮಾಡುವಂತೆ ಸ್ಥಳವನ್ನು ಒದಗಿಸಿಕೊಟ್ಟಿದ್ದಾರೆ,ಅಲ್ಲದೆ ಕುಂಬಾರ ಸಮುದಾಯದ ಹಿರಿಯಣ್ಣನಾಗಿ ಸಮಾಜಕ್ಕೆ ಬೇಕಾದ ನೆರವು ನೀಡುವುದಾಗಿ ಭರವಸೆಯನ್ನು ಕೂಡ ನೀಡಿದ್ದರು,ಇಂದು ಅವರು ನಮ್ಮನ್ನು ಅಗಲಿರುವುದು ತುಂಬಾ ದುಖಃದ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಕುಂಬಾರ ಸಂಘದ ಅಧ್ಯಕ್ಷ ರಾಜು ಕುಂಬಾರ,ಮುಖಂಡರಾದ ಈರಣ್ಣ ಕುಂಬಾರ,ಅರಮೇಶ ಕುಂಬಾರ,ವೀರಭದ್ರಪ್ಪ ಕುಂಬಾರ,ನಿಂಗಣ್ಣ ವಡಗೇರಿ ಮಾತನಾಡಿದರು.ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಸಾಹೇಬಗೌಡ ಕುಂಬಾರ,ಪ್ರಧಾನ ಕಾರ್ಯದರ್ಶಿ ಭೀಮರಾಯ ಕುಂಬಾರಪೇಟ,ಮಡಿವಾಳಪ್ಪ ಕುಂಬಾರ,ಅಂಬ್ರೇಶ ಪಾನಶಾಪ,ಬಸವರಾಜ ಕುಂಬಾರ,ಶಿವಪುತ್ರ ಕುಂಬಾರ,ಆನಂದ ಫೋಟೊ ಸ್ಟುಡಿಯೋ,ಆದಪ್ಪ ಕುಂಬಾರ,ಸೂಗಣ್ಣ ಕುಂಬಾರ,ಸಣ್ಣ ಈರಪ್ಪ ಕುಂಬಾರ,ರುದ್ರಪ್ಪ ಕುಂಬಾರ,ಈರಪ್ಪ ತಿಮ್ಮಾಪುರ,ನಾಗಪ್ಪ ಕುಂಬಾರ,ಆನಂದ ಮಲ್ಯಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…