ಬಿಸಿ ಬಿಸಿ ಸುದ್ದಿ

ಭಾರತಕ್ಕೆ ಶ್ರೇಷ್ಠ ಧಾರ್ಮಿಕ ಪರಂಪರ: ಮೌಲಾನಾ ವಲಿವುಲ್ಲಾಹ

ತಾಳಿಕೋಟಿ: ಭಾರತ ವಿಶ್ವದಲ್ಲಿ ಶ್ರೇಷ್ಠವಾದ ಆಧ್ಯಾತ್ಮಿಕ ಪರಂಪರೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿ ವಿಭಿನ್ನ ಜಾತಿ ಧರ್ಮದ ಜನರು ಶತ-ಶತ ಮಾನಗಳಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕುತ್ತಿದ್ದಾರೆ ಕೂಡಿ ಬಾಳುವುದು ಈ ದೇಶದ ಮಣ್ಣಿನ ಗುಣ ಧರ್ಮವಾಗಿದೆ ಅದನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ದಾಗಿದೆ ಎಂದು ಜಮಾತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಮೌಲಾನಾ ವಲಿವುಲ್ಲಾಹ ಸಯೀದಿ ಫಲಾಯಿ ಹೇಳಿದರು.

ಪಟ್ಟಣದ ಟಿಪು ನಗರದಲ್ಲಿ ಸನ್ಮಾರ್ಗ ಟ್ರಸ್ಟ್ ವತಿಯಿಂದ ನಿರ್ಮಿಸಿದ ನೂತನ ಆಲಾ ಮಸೀದಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲ ಧರ್ಮೀಯರು ಕೂಡಿ ಹೋರಾಟ ಮಾಡಿದ್ದೇವೆ ಪಡೆದುಕೊಂಡ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದೇಶದಲ್ಲಿ ಪರಸ್ಪರ ಅಪನಂಬಿಕೆ ತಪ್ಪು ತಿಳುವಳಿಕೆಯ ವಾತಾವರಣ ನಿರ್ಮಾಣ ಆಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ ಪರಸ್ಪರ ಪ್ರೀತಿ ಮತ್ತು ವಿಶ್ವಾಸದಿಂದಲೇ ದೇಶದ ನಿರ್ಮಾಣ ಹಾಗೂ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಖಾಸ್ಗತೇಶ್ವರ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮಾತನಾಡಿ ನಾವೆಲ್ಲರೂ ಭಾರತೀಯರು ನಾವೆಲ್ಲರೂ ಒಂದು ಎಂಬ ಭಾವನೆ ಎಲ್ಲರಲ್ಲೂ ಬೆಳೆಯಬೇಕಾಗಿದೆ ಎಲ್ಲ ಧರ್ಮಗಳು ಶಾಂತಿ ಮತ್ತು ಪ್ರೀತಿಯನ್ನೆ ಬೋಧಿಸುತ್ತವೆ ಮನಸ್ಸುಗಳನ್ನು ಕಟ್ಟುವ ಕೆಲಸ ನಾವೆಲ್ಲರೂ ಕೂಡಿ ಮಾಡಬೇಕಾಗಿದೆ ಎಂದರು.

ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಉಪಾಧ್ಯಕ್ಷ ಮೌಲಾನಾ ಮೊಹಮ್ಮದ್ ಯೂಸೂಫ ಕಣ್ಣಿ ಮಾತನಾಡಿ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯು ದೇಶದ ಎಲ್ಲಾ ಬಾಂಧವರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಸಾಮರಸ್ಯವನ್ನು ಮೂಡಿಸಲು ಪ್ರಯತ್ನಿಸುತ್ತಿದೆ ನಾವೆಲ್ಲರೂ ಸಮಾನ ವೇದಿಕೆಗಳನ್ನು ನಿರ್ಮಾಣ ಮಾಡಿ ಈ ಕೆಲಸವನ್ನು ಮಾಡಬೇಕಾದ ಅಗತ್ಯ ಇದೆ ಎಂದರು. ವೇದಿಕೆಯಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳು. ಸೈಯದ್ ಶಕೀಲ ಅಹಮದ್ ಖಾಜಿ. ಡಾ. ಪ್ರಭುಗೌಡ ಚಬನೂರ. ಪುರಸಭೆ ಮುಖ್ಯಾಧಿಕಾರಿ ಮೋಹನ್ ಜಾಧವ.ಶಿಕ್ಷಕ ಲಾಲಹುಸೇನ ಕಂದಗಲ್ಲ. ಪ್ರಭುಗೌಡ ಮದರ್ಕಲ್. ಆರ್ .ಎಲ್. ಕೊಪ್ಪದ ಜೈಭೀಮುತ್ತಗಿ. ಪುರಸಭೆ ಸದಸ್ಯ ಮುದಕಪ್ಪ ಬಡಿಗೇರ. ಅಲ್ಲಾಭಕ್ಷ ನಮಾಜಕಟ್ಟಿ. ಕೆ.ಆರ್.ಚಿತ್ತರಗಿ ಸಯ್ಯದ್ ಬಾಹುದ್ದೀನ್ ಖಾಜಿ. ಮೆಹಬೂಬ ಆಲಂ ಬಡಗಣ. ಅಬ್ದುಲ್ ಖಾದೀರ ಜಾಮಯಿ. ಹಸನ ಕೊರಕಿ. ಇಬ್ರಾಹಿಂ ಮನ್ಸೂರ. ಅಬ್ದುಲ್ ಸತ್ತಾರ ಅವಟಿ. ಜಮಾತೆ ಇಸ್ಲಾಮೀ ಸ್ಥಳೀಯ ಅಧ್ಯಕ್ಷ ಮುಜಾಹಿದ ನಮಾಜಕಟ್ಟಿ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago