ಬಿಸಿ ಬಿಸಿ ಸುದ್ದಿ

ಕಲಬುರಗಿ: ಸುರಪುರ ತಾಲೂಕಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಶಾಸಕ ಆರ್.ವಿ.ಎನ್ ಗೆ ಶ್ರದ್ಧಾಂಜಲಿ

ಕಲಬುರಗಿ: ಇತ್ತಿಚೆಗೆ ನಿಧನರಾದ ಸುರಪುರ ಶಾಸಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ಅವರಿಗೆ ಇಲ್ಲಿನ ಸುರಪುರ ತಾಲೂಕಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸಗರನಾಡು ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುರಪುರದ ನಿವಾಸಿಗಳು ಭಾಗವಹಿಸಿ, ಮೃತರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಎರಡು ನಿಮಿಷ ಮೌನಾಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಮುಖಂಡರು, ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೀವ್ರ ಆಘಾತ ಹಾಗೂ ದುಃಖವುಂಟಾಗಿದೆ. ಸದಾಕಾಲವೂ ನಗುನಗುತ್ತಲೇ ಎಲ್ಲರೊಂದಿಗೆ ಬೆರೆತು ಮಾತನಾಡುತ್ತಿದ್ದರು. ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದರು. ಬಡವರ ಬಗ್ಗೆಯೂ ಅಪಾರ ಕಾಳಜಿಯನ್ನು ಹೊಂದಿದ್ದರು ಎಂದರು.

ಕಲಬುರಗಿಯಲ್ಲಿ ನಡೆದ ಸುರಪುರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾಂಭದಲ್ಲಿ ಭಾಗವಹಿಸಿ ದೂರದಲ್ಲಿರುವ ತಾಲೂಕಿನ ಜನತೆ ತಮಗೆ ತೋರಿದ ಪ್ರೀತಿ-ವಿಶ್ವಾಸಕ್ಕೆ ಬಹಳಷ್ಟು ಹರ್ಷ ವ್ಯಕ್ತಪಡಿಸಿದ್ದರು ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಸಂದರ್ಭದಲ್ಲಿ ಸುರಪುರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಸುರಪುರಕ್ಕೆ ಹೋಗಿ ಅವರಿಗೆ ಸನ್ಮಾನಿಸಿ, ಅಭಿನಂದಿಸಿ, ಹರ್ಷ ವ್ಯಕ್ತಪಡಿಸಲಾಗಿತ್ತು ಎಂದು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ನಿವಾಸಿಗಳ ಸಂಘದ ಅಧ್ಯಕ್ಷ ಪ್ರೊ.ಬಿ.ಪಿ.ಹೂಗಾರ, ಸಹಕಾರ ಸಂಘದ ಅಧ್ಯಕ್ಷ ವೆಂಕಟೇಶ ನಿರಡಗಿ, ಎಸ್.ಡಿ. ಕಟ್ಟಿಮನಿ, ಪ್ರೊ.ಬಸವರಾಜ ಭಾವಿ, ಚನ್ನಬಸವರಾಜ ನಿಷ್ಠಿ ದೇಶಮುಖ, ವೆಂಕಪ್ಪ ನಿರಡಗಿ, ವಿ.ಡಿ.ಪಾಟೀಲ್, ನಾಗರಾಜ ಜಮದ್ರಖಾನಿ, ತೇಜಸಿಂಗ್ ಹಜಾರೆ, ಚಂದ್ರಶೇಖರ ಕಕ್ಕೇರಾ, ನಾಗರಾಜ ಸುರಪುರ, ಈಶ್ವರ ಕಟ್ಟಿಮನಿ, ಡಾ.ರಾಘವೇಂದ್ರ ಗುಡುಗುಂಟಿ, ಗಂಗಾಧರ ಸುರಪುರ, ಕನಕಪ್ಪ ಬಿಲ್ಲವ, ಚಂದಪ್ಪ ಹೇಮನೂರು, ಪ್ರಾಣೇಶ, ಗಿರಿಧರ ರಫುಗಾರ್, ಪಿಡ್ಡಪ್ಪ ಜಾಲಗಾರ, ವೆಂಕಟೇಶ ಜಿ.ಕುಲಕರ್ಣಿ, ನಾಗಪ್ಪ, ಅರುಣಕುಮಾರ ಪುಲ್ಸೆ, ವೆಂಕಟೇಶ ಜಹಗರಿದಾರ್, ಡಾ.ರವೀಂದ್ರ ಗುಳಗಿ, ರವೀಂದ್ರ ದೋಶೆಟ್ಟಿ, ಗಿರೀಶ ಬಳಗಾನೂರು ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago