ಕಲಬುರಗಿ: ಕಲಬುರಗಿ ನಗರದಲ್ಲಿ ಮೂರ್ನಾಲ್ಕು ಬಡಾವಣೆ ಅಭಿವೃದ್ಧಿಪಡಿಸಿ 20×30 ಅಳತೆಯ ನಿವೇಶನಗಳನ್ನು ಬಡ ಜನರಿಗೆ ನೀಡಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಜರ್ ಆಲಂ ಖಾನ್ ಅವರು ಹೇಳಿದರು.
ಸೋಮವಾರ ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಲಬುರಗಿ ನಗರದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಆಳಂದ ರಸ್ತೆ, ತಾಜ ಸುಲ್ತಾನಪುರ ರಸ್ತೆ ಅಭಿವೃದ್ಧಿಪಡಿಸಲಾಗುವುದು. ನಗರದ ಜನತೆ ವಾರಂತ್ಯಾದ ದಿನಗಳನ್ನು ಕಳೆಯಲು ನಗರಕ್ಕೆ ಹೊಂದಿಕೊಂಡಿರುವ ಕೆರೆ ಭೋಸಗಾ, ಖಾಜಾ ಕೋಟನೂರ ಕೆರೆಗಳನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತನೆ ಮಾಡಲಾಗುವುದೆಂದರು.
ಕಲಬುರಗಿ ನಗರದಲ್ಲಿನ ಸಾರ್ವಜನಿಕ ಉದ್ಯಾನವನಗಳ ಸಂರಕ್ಷಣೆ ಜೊತೆಗೆ ಉದ್ಯಾನವನದಲ್ಲಿ ಜಿಮ್, ಯೋಗಾ ಸೆಂಟರ್ ಸ್ಥಾಪಿಸಲಾಗುವುದು. ಒಟ್ಟಾರೆಯಾಗಿ ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಇದಕ್ಕೆ ಬೇಕಾದ ಹೆಚ್ಚಿನ ಅನುದಾನವನ್ನು ಸಹ ರಾಜ್ಯ ಸರ್ಕಾರದಿಂದ ತರಲಾಗುವುದು ಎಂದರು.
ಅನಧಿಕೃತ ಬಡಾವಣೆ ಕಡಿವಾಣಕ್ಕೆ ಟಾಸ್ಕ್ ಪೋರ್ಸ್: ಕಲಬುರಗಿ ನಗರದಲ್ಲಿನ ಅನಧಿಕೃತ ಬಡಾವಣೆಗಳ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಪ್ರಾಧಿಕಾರದ ಸಿ.ಎ. ನಿವೇಶನಗಳನ್ನು ಆಸ್ಪತ್ರೆ, ಶಾಲೆಗೆ ನೀಡಲಾಗುವುದು ಎಂದು ಮಜರ್ ಆಲಂ ಖಾನ್ ತಿಳಿಸಿದರು.
ನೂತನ ಅಧ್ಯಕ್ಷರಿಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷೆ ಮತ್ತು ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಹೂಗುಚ್ಛ ನೀಡಿ ಶುಭ ಕೋರಿದರು. ಪ್ರಾಧಿಕಾರದ ಆಯುಕ್ತ ದೇವೆಂದ್ರಪ್ಪ ಬಡಿಗೇರ ಅವರು ಸಂವಿಧಾನ ಪೀಠಿಕೆ ನೀಡಿದರು.
ನಗರ ಯೊಜನಾ ಪ್ರಾಧಿಕಾರದ ಸದಸ್ಯ ಎಸ್.ಎಸ್. ಗಾರಂಪಳ್ಳಿ ಸೇರಿದಂತೆ ಇತರೆ ಚುನಾಯಿತ ಜನಪ್ರತಿನಿಧಿಗಳು, ಕುಡಾ ಅಧಿಕಾರಿ ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…