ಬಿಸಿ ಬಿಸಿ ಸುದ್ದಿ

ಬಿಜೆಪಿ ರಾಷ್ಟ್ರವಾದವನ್ನು ಪ್ರತಿಪಾದಿಸುವ ಪಕ್ಷ- ಅಮರನಾಥ ಪಾಟೀಲ

ಆಳಂದ; ಬಿಜೆಪಿ ಪಕ್ಷವು ಭಾರತದ ಮೂಲೆ ಮೂಲೆಗಳಲ್ಲಿ ತನ್ನ ವಿಚಾರಧಾರೆಯ ಮೂಲಕ ಬಲಗೊಂಡಿದೆ. ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ರಾಷ್ಟ್ರೀಯವಾದವನ್ನು ಉಸಿರಾಡುವ ರಾಷ್ಟ್ರೀಯವಾದಿ ಪಕ್ಷವಾಗಿ ಜನ ಮನ್ನಣೆ ಗಳಿಸಿದೆ ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅಮರನಾಥ ಪಾಟೀಲ ಅಭಿಪ್ರಾಯಪಟ್ಟರು.

ಸೋಮವಾರ ಆಳಂದ ಪಟ್ಟಣದ ಎ. ವಿ ಪಾಟೀಲ ಕಲ್ಯಾಣ ಮಂಟಪದಲ್ಲಿ ಆಳಂದ ಮಂಡಲ ಬಿಜೆಪಿಯ ನೂತನ ಮಂಡಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೀನದಯಾಳ್ ಉಪಾಧ್ಯಾಯ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿಯವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಿಬಂದ ಪಕ್ಷವು ಇಂದು ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂಬುದು ನಮ್ಮ ಹೆಮ್ಮೆ ಎಂದರು.

ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ಬಿಜೆಪಿಗೆ ಬಲ ತುಂಬಿದವರು ಕಾರ್ಯಕರ್ತರು. ನನ್ನ ಅವಧಿಯಲ್ಲಿ ನನ್ನೊಂದಿಗೆ ಹೆಗಲುಕೊಟ್ಟು ನಾವೆಲ್ಲರೂ ಜೊತೆಯಾಗಿ ನಿಂತು ಪಕ್ಷವನ್ನು ಬಲಪಡಿಸೋಣ ಎಂದರು.

ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ಆಳಂದ ಮಂಡಲವು ಪಕ್ಷ ಸಂಘಟನೆಯಲ್ಲಿ ಅಗ್ರಶ್ರೇಣಿಗೇರಲು ಸಂಘಟನಾ ತಂಡದ ಶ್ರಮ ಮಹತ್ವದ್ದಾಗಿದೆ. ಮಂಡಲ ಅದ್ಯಕ್ಷರಾಗಿದ್ದ ಆನಂದ ಪಾಟೀಲ ಅವರ ಸಂಘಟನಾ ನೈಪುಣ್ಯತೆ ಹಾಗೂ ಕಾರ್ಯದರ್ಶಿಗಳ ಸಂಘಟನಾ ಸಾಮಥ್ರ್ಯವು ಮುಂದಿನ ಮಂಡಲ ಸಮಿತಿಗೆ ಆದರ್ಶಪ್ರಾಯವಾಗಲಿ ಎಂದರು.

ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅವರು, ಭಾರತೀಯ ಜನತಾ ಪಾರ್ಟಿಯು ಯುವ ನಾಯಕತ್ವದಲ್ಲಿ ಬೆಳೆಯುವ ಅತ್ಯಂತ ಬಲಾಢ್ಯ ರಾಜಕೀಯ ಪಕ್ಷವಾಗಿದೆ. ಜನ ಸಂಘದಿಂದ ಇಂದಿನ ವರೆಗೆ ಪಕ್ಷದ ಚಟುವಟಿಕೆಗಳು ಬಹಳಷ್ಟು ವಿಸ್ತಾರಗೊಂಡಿದೆ. ಮುಂದೆಯೂ ಕೂಡ ಪಕ್ಷ ಸಂಘಟನೆಗೆ ಶ್ರಮಿಸೋಣ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಶಕ್ತಿಯನ್ನು ತೋರಿಸೋಣಾ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ, ಹಣಮಂತರಾವ ಮಾಲಾಜಿ, ವಿಠ್ಠಲರಾವ ಪಾಟೀಲ, ಶ್ರೀಶೈಲ ಪಾಟೀಲ, ಚಂದ್ರಕಾಂತ ಭೂಸನೂರ, ಸಂತೋಷ ಹಾದಿಮನಿ, ಗೌರಿ ಚಿಚಕೋಟಿ, ಸುನೀತಾ ಪೂಜಾರಿ, ಶಿವಾನಂದ ಪಾಟೀಲ, ಶರಣು ಕುಮಸಿ, ಪ್ರ. ಕಾರ್ಯದರ್ಶಿಗಳಾದ ಪ್ರಕಾಶ ಮಾನೆ, ಸೀತಾರಾಮ ಜಮಾದಾರ ಸೇರಿದಂತೆ ಪುರಸಭೆ ಸದಸ್ಯರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ಮಹಾಂತಪ್ಪ ಆಲೂರೆ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಶರಣಗೌಡ ಪಾಟೀಲ ದೇವಂತಗಿ ನಿರೂಪಿಸಿ, ವಂದಿಸಿದರು. ಮಲ್ಲಿಕಾರ್ಜಿನ ತಡಕಲ ಸ್ವಾಗತಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago