ಕಲಬುರಗಿ: ಅದಾನಿ ಒಡೆತನದ ವಾಡಿ ಎಸಿಸಿ ಕಾರ್ಖಾನೆಯು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಗುತ್ತಿಗೆ ಕಾರ್ಮಿಕರು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಕಂಪೆನಿ ಎದರುಗಡೆ ಬೃಹತ್ ಪ್ರತಿಭಟನೆ ನಡೆಸಿದರು.
ಕಾರ್ಖಾನೆಯ ಗೇಟ್- 1 ಹಾಗೂ ಗೇಟ್- 2ರ ಮುಂಭಾಗ ಕಾರ್ಮಿಕರು ಜಮಾಯಿಸಿ, ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರನ್ನು ನಿರಂತರವಾಗಿ ಶೋಷಣೆ ಮಾಡಲಾಗುತ್ತಿದೆ. ಕೆಲಸ ಅವಧಿ ಬದಲಾವಣೆ ಜತೆಗೆ ದುಡಿಮೆ ಅವಧಿ ಹೆಚ್ಚಳ ಮಾಡಿ ಕಾರ್ಮಿಕರಿಗೆ ಶೋಷಣೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಊಟದ ಸಮಯ ಹಾಗೂ ವಿಶ್ರಾಂತಿಗೂ ಅವಕಾಶ ನೀಡುತ್ತಿಲ್ಲ. ನಮ್ಮನ್ನು ಯಂತ್ರಗಳಂತೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮಂಡಳಿಯ ಅಧಿಕಾರಿ ಪ್ರತಿಭಟನಾ ನಿರತ ಕಾರ್ಮಿಕರ ಮನವೊಲಿಸುವ ಪ್ರಯತ್ನ ನಡೆಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…