ಬಿಸಿ ಬಿಸಿ ಸುದ್ದಿ

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಶಾಸಕ ಎಂ.ವೈ.ಪಾಟೀಲ

ಕಲಬುರಗಿ: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ದಿಪಡಿಸಿರುವ ಪಂಚಮಿತ್ರ ಪೋರ್ಟಲ್‍ನ್ನು ಅಫಜಲಪೂರ ಶಾಸಕರಾದ ಎಂ.ವೈ. ಪಾಟೀಲ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೋಕಾರ್ಪಣೆಗೊಳಿಸಿದರು.

ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ” ಪಂಚಮಿತ್ರ” ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ಮಾತನಾಡಿ, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್‍ಗಳು ಇರಲಿಲ್ಲ ದೇಶದಲ್ಲಿ ಪ್ರಪ್ರಥಮ ಬಾರಿಗೆ ತಿhಚಿಣsಚಿಠಿಠಿ ಅhಚಿಣ ಅಭಿವೃದ್ಧಿ ಪಡಿಸಲಾಗಿದೆ ಎಂದರು.

ಪಂಚಮಿತ್ರ ತಿhಚಿಣsಚಿಠಿಠಿ ಅhಚಿಣ ಓo. 8277506000 ಮೂಲಕ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದಾಗಿದೆ. ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್‍ಗಳ ಮುಂಬರುವ ಸಭೆಗಳ ಮಾಹಿತಿ, ಸೇವೆಗಳ ವಿವರಗಳು, ಸ್ವಸಹಾಯ ಗುಂಪಿನ ವಿವರಗಳು, ಆದಾಯ ಸಂಗ್ರಹ ವಿವರಗಳು ಮತ್ತು 4(1)(ಎ)&(1)(ಬಿ) ಆರ್‍ಟಿಐ ದಾಖಲೆಗಳು ಪಡೆಯಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಫೋಸ್ಟರ್ ಗಳು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ ಎಂ.ವಿ. ಚಳಿಕೇರಿ, ಕಾರ್ಯನಿರ್ವಾಹಕ ಅಭಿಯಂತರರಾದ ಶಿವಾನಂದ, ತಾಲೂಕ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸ ರಾಜ್,ವೀರಣ್ಣ ಕೌಲಗಿ, ಚನ್ನಪ್ಪ, ಶಂಕರ ರಾಠೋಡ, ಸೈಯದ್ ಪಟೇಲ್, ಅಂಬರೇಷ್ ಪಾಟೀಲ, ಸೇರಿದಂತೆ ಎಲ್ಲಾ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago