ಬಿಸಿ ಬಿಸಿ ಸುದ್ದಿ

ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯಿದೆ ಇಂದಿನಿಂದ ಅನುಷ್ಠಾನ: ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯಿದೆ, 2023 ಅನ್ನು 4ನೇ ಮಾರ್ಚ್ 2024ರಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಶಾಸನ ರಚನೆ, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು ತಿಳಿಸಿದರು.

ಇಂದು ವಿಧಾನಸೌಧದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾಯ್ದೆ ಜಾರಿಯಿಂದಾಗಿ ರಾಜ್ಯದಲ್ಲಿ ಬಡವರು, ಸಣ್ಣ, ಅತಿ ಸಣ್ಣ ರೈತರು ಮತ್ತು ದುರ್ಬಲ ವರ್ಗದವರು ಆರ್ಥಿಕವಾಗಿ ಹಿಂದುಳಿದ ವರ್ಗದವರು ನ್ಯಾಯಾಲಯಗಳಲ್ಲಿ ದೀರ್ಘ ಕಾಲದವರೆಗೆ ಪ್ರಕರಣಗಳನ್ನು ನಿರ್ವಹಿಸಲು ಅಸಾಧ್ಯವಾದ ಪರಿಸ್ಥಿತಿಯನ್ನು ನಿಭಾಯಿಸಲು ಆದ್ಯತೆಯ ಮೇಲೆ ಸೂಕ್ತವಾದ ವ್ಯವಸ್ಥೆ ರೂಪಿಸಲಾಗಿದೆ ಎಂದು ಅವರು ವಿವರಿಸಿದರು.

ಯಾವುದೇ ಸಿವಿಲ್ ವ್ಯಾಜ್ಯದಲ್ಲಿ ಬಡವರು ಅಥವಾ ಆರ್ಥಿಕವಾಗಿ ದುರ್ಬಲರು ಮತ್ತು ಸಣ್ಣ, ಅತಿಸಣ್ಣ ರೈತರು 6 ತಿಂಗಳಿಗಿಂತ ಹೆಚ್ಚು ನ್ಯಾಯದಾನಕ್ಕಾಗಿ ಕಾಯಬೇಕಾಗಿಲ್ಲ ಎಂದು ತಿಳಿಸಿದರು.

ಕಾಯಿದೆಯು ದಿನಾಂಕ 19-07-2023 ರಂದು ವಿಧಾನಸಭೆಯಲ್ಲಿ ಮತ್ತು ದಿನಾಂಕ 20-07-2023 ರಂದು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿತ್ತು. ರಾಷ್ಟ್ರಪತಿಯವರ ಅಂಕಿತ ಈ ವಿಧೇಯಕಕ್ಕೆ ಅಗತ್ಯವಿದ್ದುದರಿಂದ ವಿಧೇಯಕವನ್ನು ರಾಷ್ಟ್ರಪತಿಯವರಿಂದ ಅಂಕಿತಕ್ಕೆ ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೆ ದಿನಾಂಕ 18-02-2024 ರಂದು ರಾಷ್ಟ್ರಪತಿಯವರಿಂದ ಅಂಕಿತ ದೊರಕಿತ್ತು ಎಂದು ಅವರು ವಿವರಿಸಿದರು.

ಈ ಕಾಯಿದೆಯ ಅನುಷ್ಠಾನಕ್ಕೆ ಅಗತ್ಯವಿರುವ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಸದರಿ ಮಾರ್ಗಸೂಚಿಯು ಎರಡು ಹೆಕ್ಟೇರ್ ಒಣಬೇಸಾಯ ಭೂಮಿ ಅಥವಾ ಒಂದು ಮತ್ತು ನಾಲ್ಕನೇ ಒಂದು ಹೆಕ್ಟೇರ್ ಮಳೆಯಾಶ್ರಿತ ಅರ್ಧ ಭೂಮಿ ಅಥವಾ ಒಂದು ನೀರಾವರಿ ಬೆಳೆ ಬೆಳೆಯಲು ಅಥವಾ ತೋಟದ ಬೆಳೆಗಳನ್ನು ಬೆಳೆಯಲು ಅಥವಾ ದ್ರಾಕ್ಷಿ ಅಥವಾ ತೆಂಗು ಅಥವಾ ಅಡಿಕೆ ಅಥವಾ ಕಬ್ಬು ಬೆಳೆಯಲು ಅಥವಾ ನೀರಾವರಿ ಮೂಲಕ ರೇಷ್ಮೆ ಬೆಳೆಯಲು ಅರ್ಧ ಹೆಕ್ಟೇರ್ ಭೂಮಿ ಅಥವಾ ದೀರ್ಘಕಾಲಿಕ ನೀರಾವರಿ ಸೌಲಭ್ಯಗಳನ್ನು ಹೊಂದಿರುವ ಅಥವಾ ವರ್ಷದಲ್ಲಿ ಒಂದಕ್ಕಿಂತ ಹೆಚ್ಚು ನೀರಾವರಿ ಬೆಳೆಗಳನ್ನು ಬೆಳೆಯುವ ಸೌಲಭ್ಯಗಳಿರುವ ಕಾಲು ಹೆಕ್ಟೇರ್ ಭೂಮಿ ಒಳಗೊಂಡಿದೆ ಎಂದು ಅವರು ವಿವರಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

13 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago