ಬಿಸಿ ಬಿಸಿ ಸುದ್ದಿ

ಸೌಲಭ್ಯಗಳ ಸದ್ಭಳಿಕೆಯಿಂದ ಪ್ರಗತಿ ಸಾಧ್ಯ : ಜನಾಬ ಮುಹಮ್ಮದ ಅಲಿ ಅಲ್ ಹುಸ್ಸೇನಿ

ಕಲಬುರಗಿ: ಖಾಜಾ ಬಂದಾನವಾಜ ವಿಶ್ವವಿದ್ಯಾಲಯ ಈಗ ಬೆಳವಣಿಗೆ ಪಥದಲ್ಲಿದ್ದು ಅನೇಕ ಸೌಲಭ್ಯಗಳು ಹೆಚ್ಚುತ್ತಿವೆ. ಆ ಸೌಲಭ್ಯಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಲು ವಿವಿಯ ಸಮಾಕುಲಾಧಿಪತಿ ಜನಾಬ ಸಯ್ಯದ ಮುಹಮ್ಮದ ಅಲಿ ಅಲ ಹುಸ್ಸೇನಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವಿವಿಯ ಮೆಡಿಕಲ್ ನಿಕಾಯದ ಹೊಸ ಲೆಕ್ಚರ ಹಾಲ್ ನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಕೆಬಿಎನ್ ಕೂಡ ಒಂದಾಗಬೇಕೆನ್ನುವುದು ಕುಲಾಧಿಪತಿಗಳ ಕನಸು. ಆ ಕನಸನ್ನು ನನಸು ಮಾಡುವತ್ತ ನಾವೆಲ್ಲರೂ ಶ್ರಮಿಸಬೇಕು. ಮುಂದುವರೆದ ಸಂಶೋಧನೆ, ತಂತ್ರಜ್ಞಾನಗಳ ಬಗ್ಗೆ ಜ್ಞಾನ ಇವೆಲ್ಲ ವಿಶ್ವವಿದ್ಯಾಲಯದ ಉನ್ನತಿಗೆ ಅವಶ್ಯ ಎಂದರು.

ವಿವಿಯ ಉಪಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಮಾತನಾಡಿˌ ನಮಗೆ ಅತಿ ವೇಗವಾಗಿ ಎಲ್ಲ ಸೌಲಭ್ಯ ಗಳನ್ನು ಒದಗಿಸಿ ಕೊಡುತ್ತಿರುವ ಸಮಾಕುಲಧಿಪತಿಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಉಪನ್ಯಾಸಕರಿಗೆ ಯಾವುದೇ ಸಮಸ್ಯೆ ಇದ್ದರು. ಪರಿಹಾರ ಕೊಡಲು ಪ್ರಯತ್ನಿಸುತ್ತೇನೆ. ಸಂಸ್ಥೆ ಮತ್ತು ಉದ್ಯೋಗಿಗಳ ನಡುವೆ ಒಳ್ಳೆಯ ಸಂಬಂಧವಿದ್ದಲ್ಲಿ ಸರಾಗವಾಗಿ ಕೆಲಸ ಮಾಡಬಹುದು ಎಂದರು.

ಸಮಾರಂಭದಲ್ಲಿ ವಿವಿಯ ಎಲ್ಲ ನಿಕಾಯದ ಸಿಬ್ಬಂದಿಗಳು ಹಾಜರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago