ಕಲಬುರಗಿ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವತಿಯಿಂದ ಜಿಲ್ಲೆ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಬೈಕ್ ರ‍್ಯಾಲಿ ಅಭಿಯಾನ ಚಾಲನೆ ನೀಡಿದರು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಬಿತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೆ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರತಿಕಾಂತ ಸ್ವಾ,ಮಿ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಯಿಂದ ಎಸ್‌ಟಿಬಿಟಿ ಸಂತ್ರಸ ವಾಡಿ ಸಾತಗುಂಬಜ್, ಮಿಜುಗೂರಿ, ಹುಮನಾಬಾದ ಬೇಸ, ಸೂಪರ ಮಾರ್ಕೆಟ ಬ್ರಹ್ಮಪೂರ ಪೋಲಿಸ್ ಠಾಣೆ, ಜಗತ್ ಸರ್ಕಲ್ ದಿಂದ ಮತದಾರರ ಜನ ಜಾಗೃತಿ ಅಭಿಯಾನ ನಗರದ ವಿವಿಧ ಕಡೆ ಸಂಚಾರಿಸಿ ಬಂದು ಜಿಲ್ಲಾಧಿಕಾರಿ ಕಚೇರಿ ಬಂದು ಮುಕ್ತಾಯಗೊಂಡಿತು.
ಜಿಲ್ಲಾ ಪಂಚಾಯತ್ ಸಿ.ಇ.ಓ. ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತರಾದ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾ ಪಂಚಾಯತ ಕಾರ್ಯಾದರ್ಶಿ ಮಲ್ಲಿಕಾರ್ಜುನ ಚಳಗೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ ಯು. ಅಂಗವೀಕಲ ಕಲ್ಯಾಣಾಧಿಕಾರಿ ಸಾಧಿಕ ಹುಸೇನ್ ಖಾನ, ಜಿ.ಪಂ. ಅಧೀಕ್ಷಕ ಜನನಮಲ್ಲಿಕಾರ್ಜುನ, ನ್ಯೂ ಲೈಫ್ ಅಂಗವಿಕಲ ಮಹಿಳಾ ಅಂಗವಿಕಲರ ಸಂಘದ ಅಧ್ಯಕ್ಷರಾದ ಮಹೆಬೂಬ್ ಬಿ, ಉಪಾಧ್ಯಕ್ಷರಾದ ಶಕೀಲಾ ಬೇಗಂ ಸೇರಿದಂತೆ ಅಧಿಕಾರಿಗಳು ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…