ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ನಗರದ ಜಯನಗರ ಶಿವಮಂದಿರದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಮಾ.8 ರಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಅದ್ದೂರಿಯಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ಜರುಗುವುದು ಎಂದು ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 5 ಗಂಟೆಗೆ ಶಿವನಿಗೆ ರುದ್ರಾಭಿಷೇಕ ನಡೆಯುವುದು.ನಂತರ ಭಕ್ತಾದಿಗಳಿಂದ ಅಭಿಷೇಕ ನಡೆಯುತ್ತವೆ.ಬೆಳಿಗ್ಗೆ 10:30ಕ್ಕೆ ಟ್ರಸ್ಟ್ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಬಡಾವಣೆಯ ಮಹಿಳೆಯರ ನೇತೃತ್ವದಲ್ಲಿ ವಿಶೇಷವಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ನಡೆಯುವುದು. ಮಂಗಲ ಕಾರ್ಯ ಕುರಿತು ಹಾಗೂ ಧಾರ್ಮಿಕ ವಿಧಿ ವಿಧಾನಗಳ ಬಗ್ಗೆ ಕವಲಗಾ(ಕೆ) ವಿರಕ್ತ ಮಠದ ಷ.ಬ್ರ.ಪೂಜ್ಯ ಶ್ರೀ ಷಣ್ಮುಖ ಶಿವಯೋಗಿ ಸ್ವಾಮೀಜಿ ತಿಳಿಸಿಕೊಡುವರು.ಇದೇ ಸಮಯದಲ್ಲಿ ಅವರ ಪಾದ ಪೂಜೆ ನೆರವೇರುವುದು.
ಅಂದು ಸಂಜೆ ವಿಶೇಷ ಪೂಜೆ ನಂತರ ರಾತ್ರಿ 8 ಗಂಟೆಗೆ ಜಾಗರಣೆ ಅಂಗವಾಗಿ ಭಜನಾ ತಂಡದ ವತಿಯಿಂದ ಭಕ್ತಿ ಗೀತೆಗಳು, ಭಜನೆ ಹಾಗೂ ಕಲಾವಿದ ಸಿ.ಎಸ್. ಮಾಲಿಪಾಟೀಲ ಅವರಿಂದ ಭಾವಗೀತೆಗಳ ಸಂಗೀತ ಸಂಜೆ ನಡೆಯಲಿದೆ.ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಅವರು ಶಿವಲೀಲೆ ಕುರಿತು ಮಾತನಾಡುವರು.
ಈ ಸಂದರ್ಭದಲ್ಲಿ ಅನೇಕ ಗಣ್ಯರು, ಸಾಹಿತಿಗಳು ಉಪಸ್ಥಿತರಿರುವರು.ಕಾರಣ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯನಗರ ಶಿವಮಂದಿರಕ್ಕೆ ಆಗಮಿಸಬೇಕು ಎಂದು ಅವರು ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…