ಕಲಬುರಗಿ; ರಾಜ್ಯದಿಂದ ಬಹುಪಾಲು ತೆರಿಗೆ ಪಡೆಯುವ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ತೆರಿಗೆ ನೀಡದಿರುವುದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡುರಾವ ಅವರು ಬೇಸರ ವ್ಯಕ್ತಪಡಿಸಿದರು.
ಗುರುವಾರ ಕಲಬುರಗಿ ನಗರದ ನವೀಕೃತ ಶರಬಸವೇಶ್ವರ ಕೆರೆಯ ಸಾರ್ವಜನಿಕ ಉದ್ಯಾನವನ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾಲಿನ ತೆರಿಗೆ ಹಣ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದರು.
ರಾಜ್ಯದಲ್ಲಿ ಭೀಕರ ಬರಗಾಲವಿದೆ. ಅನ್ನದಾತ ಸಂಕಷ್ಟದಲ್ಲಿದ್ದಾನೆ. ಬರಗಾಲ ಪರಿಹಾರ ಹಣ ಸಹ ಬಿಡುಗಡೆ ಮಾಡುತ್ತಿಲ್ಲ. ನರೇಗಾ ಕೂಲಿ ದಿನ ಹೆಚ್ಚಿಸುತ್ತಿಲ್ಲ. ಹಲವಾರು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್ ಸೇರಿದಂತೆ ಹಲವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…