ಕಲಬುರಗಿ: ಆಂಧ್ರ ಗಡಿಭಾಗದ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದ ನಂದಿಶ್ವರ ಬೆಟ್ಟದಲ್ಲಿ ಶಿವಮಂದಿರ ಹಾಗೂ ರೂಪರಹಿತ ಮಾತಾ ಮಾಣಿಕೇಶ್ವರಿ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಪ್ರಧಾನ ಅರ್ಚಕ ಶಿವಯ್ಯ ಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆ, ಪಾದಪೂಜೆ, ರುದ್ರಾಭಿಷೇಕ, ಮಹಾ ಮಂಗಳಾರತಿ ನಡೆದವು.
ಉರಿಬಿಸಿಲು ಲೆಕ್ಕಿಸದೆ ಭಕ್ತಗಣ ಸರದಿ ಸಾಲಿನಲ್ಲಿ ನಿಂತು ಮಾತಾಜಿಯವರ ದರ್ಶನ ಪಡೆದು ಪುನಿತರಾದರು. ಬಂದಂತಹ ಭಕ್ತಾದಿಗಳಿಗೆ ಕುಡಿಯುವ ನೀರು ಹಾಗೂ ಪ್ರಸಾದ ವ್ಯವಸ್ಥೆ ಮಾಡಲಾಯಿತು.
ದಕ್ಷಿಣ ಭಾರತದ ಅರ್ಚಕ ಮಂಡಳಿಯ ಪ್ರಮುಖ ಮಾರ್ಥಂಡ್ ದೇಶಪಾಂಡೆ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಬೀದರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜ್ಞಾನೇಶ್ವರ ಯಾದವ, ಅಹಿಂಸಾ ಯೋಗೇಶ್ವರ ವೀರಧರ್ಮಜ್ ಮಾತಾಜಿ ಟ್ರಸ್ಟ್ ಸದಸ್ಯ ಹಾಗೂ ನಿವೃತ್ತ ಡಿವೈಎಸ್ಪಿ ಸಿದ್ರಾಮಪ್ಪ ಸಣ್ಣೂರಕರ, ಯಾದಗಿರಿ ರೈಲ್ವೆ ಸಲಹಾ ಸಮಿತಿ ಸದಸ್ಯ ಹಣಮಂತ ಮಡ್ಡಿ, ಪತ್ರಕರ್ತ ಭೀಮಾಶಂಕರ ಫಿರೋಜಾಬಾದ, ಕಸಾಪ ಅವರಾದ ವಲಯ ಅಧ್ಯಕ್ಷ ಸೂರ್ಯಕಾಂತ ಅವರಾದಿ, ಬಿಜೆಪಿ ಮುಖಂಡ ಪರ್ವತರೆಡ್ಡಿ ನಾಮವಾರ ಸೇರಿದಂತೆ ಆಂಧ್ರ, ತೆಲಂಗಾಣ, ಕೇರಳ, ಮಹಾರಾಷ್ಟ್ರ ರಾಜ್ಯಗಳಿಂದ ಸಹಸ್ರಾರು ಭಕ್ತರು ಪಾಲ್ಗೊಂಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…