ಶಹಾಬಾದ: ನಗರದ ಸಮೀಪದ ಭಂಕೂರ ಗ್ರಾಮದ ಶಾಂತನಗರದ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ನಿಮಿತ್ಯವಾಗಿ ಶುಕ್ರವಾರ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ 8 ಗಂಟೆಗೆ ಶಂಕರಲಿಂಗೇಶ್ವರ ದೇವಸ್ಥಾನದಿಂದ ಪಲ್ಲಕ್ಕಿಯನ್ನು ಹೊತ್ತುಕೊಂಡು ಸಣ್ಣೂರ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಮುಂದೆ ಗಂಗಾಸ್ನಾನ ಮಾಡಲಾಯಿತು. ನಂತರ ಅಲ್ಲಿಂದ ಪಲ್ಲಕ್ಕಿಯೊಂದಿಗೆ ವಿವಿಧ ವಾಧ್ಯಗಳೊಂದಿಗೆ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಈ ಪಲ್ಲಕ್ಕಿ ಮೆರವಣಿಗೆಯಲ್ಲಿ ಮಹಿಳೆಯರು ಬಿಸಿಲಿನಲ್ಲಿಯೇ ಕುಂಭ ಹೊತ್ತುಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಂತರ 10ಗಂಟೆಗೆ ಮಹಾರುದ್ರಾಭೀಷೇಕ, ರಾತ್ರಿ 9ಗಂಟೆಗೆ ಶಹಾಬಾದ ಬಸವ ಸಮಿತಿ ಹಾಗೂ ಮೌನೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ ಜಾಗರಣೆ ಕಾರ್ಯಕ್ರಮ ನಡೆಯಿತು.
ಬುಧವಾರ ಬೆಳಿಗ್ಗೆ 8 ಗಂಟೆಗೆ ಅಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ನಂತರ 10 ಗಂಟೆಗೆ ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.