ಕಲಬುರಗಿ: ಆಳಂದ ಪಟ್ಟದ ಪ್ರಸಿದ್ಧ ಸೂಫಿ ಸಂತ ಹಜರತ್ ಲಾಡ್ಲೆ ಮಶಾಕ್ (ರ. ಅ) ದರ್ಗಾದ ಆವರಣದಲ್ಲಿ ಎನ್ನಲಾಗುತ್ತಿರುವ ರಾಘವ ಚೈತನ್ಯ ಲಿಂಗಕ್ಕೆ ಮಹಾಶಿವರಾತ್ರಿ ನಿಮಿತ್ತ ನ್ಯಾಯಲಯದ ಆದೇಶದಂತೆ 15 ಜನರು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಿಂಚೋಳಿ ಮತಕ್ಷೇತ್ರದ ಶಾಸಕ ಅವಿನಾಶ್ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಸಿ ಪಾಟೀಲ್ ರೇವೂರ, ಬಿಜೆಪಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ್, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಿ, ಶ್ರೀರಾಮ ಸೇನೆಯ ರಾಜ್ಯ ಅಧ್ಯಕ್ಷ ಸಿದ್ಧಲಿಂಗ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತ್ ಸದಸ್ಯ ಹರ್ಷಾನಂದ ಗುತ್ತೇದಾರ, ಬಿಜೆಪಿ ಜಿಲ್ಲಾ ಮಾಧ್ಯಮಗಳ ಪ್ರಮುಖರಾದ ಸಂತೋಷ ಹಾದಿಮನಿ ಸೇರಿದಂತೆ ಮುಂತಾದವರು ಇದ್ದರು.