ಕಲಬುರಗಿ: ಜಿಲ್ಲೆಯಲ್ಲಿ ಜರುಗುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಇದೇ ಮಾರ್ಚ್ ೧೧ ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎ.ಸಿ.ಸಿ ಕಂಪನಿ ಗೇಟ್ ಹತ್ತಿರದ ಸುರಕ್ಷಾ ಕ್ಯಾಂಟೀನ್ ಆವರಣದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಕೆಲಸ ನಿರ್ವಹಣೆಗೆ ನೇಮಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಾರ್ಚ ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಸುರಕ್ಷಾ ಕ್ಯಾಂಟೀನ್ ಆವರಣದಲ್ಲಿ ಸಾರ್ವಜನಿಕ ಸಮಾರಂಭ ಇರಲಿದ್ದು, ರಾಜ್ಯದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸುವರು.
ಇದಕ್ಕು ಮುನ್ನ ಸಚಿವರು ಪಟ್ಟಣದಲ್ಲಿನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಯೆ ಹಾಕಲಾದ ಅಂಬೇಡ್ಕರ್ ಜೀವನ ಚರಿತ್ರೆಯ ವಸ್ತು ಪ್ರದರ್ಶನ ವೀಕ್ಷಿಸುವರು. ನಂತರ ಬಲರಾಮ ಚೌಕ್ ನಿಂದ ವೇದಿಕೆ ವರೆಗೆ ಸಾಗುವ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸುವರು. ಸುಮಾರು ೨೫-೩೦ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ವರ್ಣರಂಜಿತ ಮೆರವಣಿಗೆ ಇರಲಿದೆ ಎಂದು ಕಾರ್ಯಕ್ರಮದ ಕುರಿತು ವಿವರಿಸಿದರು.
ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ/ಉದ್ಫಾಟನೆ, ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಬಿಡುಗಡೆ ಸರ್ಕಾರ ಐದು ಗ್ಯಾರೆಂಟಗಳ ಕುರಿತು ಸಮಾವೇಶ ಇತ್ಯಾದಿ ಈ ಕಾರ್ಯಕ್ರಮಗಳಲ್ಲಿ ಜರುಗುವುದು ಎಂದು ತಿಳಿಸಿದರು.
ವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮ ಮತ್ತು ಪಟ್ಟಣಗಳ ಸುಮಾರು ೨೦ ಸಾವಿರ ಜನ ಕರೆತರುವ ವ್ಯವಸ್ಥೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಚುನಾಯಿತ ಜನಪ್ರತಿನಿಧಿಗಳು, ಶಾಸಕರು, ಡಿ.ಸಿ., ಜಿಲ್ಲಾ ಪಂಚಾಯತ ಸಿ.ಇ.ಓ ಸೇರಿ ಎಲ್ಲ ಹಿರಿಯ ಅಧಿಕಾರಿಗಳು ಭಾಗವಹಿಸುವುದರಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಅಲ್ಲದೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾಡಿ ಪಟ್ಟಣ ಮತ್ತು ಕಾರ್ಯಕ್ರಮದ ಸ್ಥಳದಲ್ಕಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಪುರಸಭೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಕಾರ್ಯಕ್ರಮ ಸ್ಥಳದಲ್ಲಿ ಅಲ್ಲಲ್ಲಿ ಡಸ್ಟ್ ಬಿನ್ ಇಡಬೇಕು. ಕಸ ವಿಲೇವಾರಿಗೆ ವಾಹನಗಳೊಂದಿಗೆ ಪೌರ ಕಾರ್ಮಿಕರನ್ನು ನಿಯೋಜಿಸಬೇಕು. ಇನ್ನು ಕಾರ್ಯಕ್ರಮದ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ಜೆಸ್ಕಾಂ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಈಗಾಗಲೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಹೋಗಲು ವೇದಿಕೆ ನಿರ್ವಹಣೆ, ಆಹಾರ, ಆರೋಗ್ಯ, ಕಾನೂನು ಸುವ್ಯವಸ್ಥೆ, ಮೂಲಸೌಕರ್ಯ, ಅಗ್ನಿಶಾಮಕ, ಮಾಧ್ಯಮ ನಿರ್ವಹಣೆ, ವಿದ್ಯುತ್ ಸರಬರಾಜು, ಸ್ವಚ್ಛತೆ ಸೇರಿ ವಿವಿಧ ಹಂತದ ಅಧಿಕಾರಿಗಳನ್ನೊಳಗೊಂಡ ೧೫ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಸಮಿತಿಗೆ ನೀಡಲಾದ ಕೆಲಸ ಕಾರ್ಯಗಳನ್ನು ಅಧಿಕಾರಿಗಳು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ಕರ್ತವ್ಯ ಲೋಪಕ್ಕೆ ಅವಕಾಶ ನೀಡಬಾರದೆಂದು ಅವರು ಸೂಚಿಸಿದರು.
ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಡಿನ ಪ್ರತಿ ಪ್ರಜೆಗೆ ಸಂವಿಧಾನದ ಮೂಲ ಆಶಯಗಳು ಮತ್ತು ಅದರ ಮಹತ್ವದ ಕುರಿತು ಜನಜಾಗೃತಿ ಮೂಡಿಸಲು ಕಳೆದ ಜನವರಿ ೨೬ಕ್ಕೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಚಾಲನೆ ಪಡೆದ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದಚಿತ್ರದ ಎರಡು ವಾಹನಗಳು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಪ್ರತ್ಯೇಕ ಮಾರ್ಗದಲ್ಲಿ ಸುಮಾರು ೨೭೧ ಗ್ರಾಮ, ಪಟ್ಟಣಗಳಲ್ಲಿ ಹಾಗೂ ೪೪ ವಸತಿ ಶಾಲೆಗಳಲ್ಲಿ ಸಂಚರಿಸಿ ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿವೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹ ಅಧಿಕಾರಿ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ್ ಹುಣಸಗಿ, ಸೇಡಂ ಉಪವಿಭಾಗದ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳಾದ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಜಾವೀದ್ ಕಾರಂಗಿ, ಜಂಟಿ ನಿರ್ದೇಶಕ ಸಮದ್ ಪಟೇಲ್, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಆರ್.ಪಿ. ಜಾಧವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ, ತಾಲೂಕು ಪಂಚಾಯತ್ ಇ.ಓ ನೀಲಗಂಗಾ ಬಬಲಾದ, ಸಮಾಜ ಕಲ್ಯಾಣ ಇಲಾಖೆಯ ಎ.ಡಿ. ಚೇತನ ಗುರಿಕಾರ್ ಸೇರಿದಂತೆ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…