ವಾಡಿಗೆ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಭೇಟಿ: ಸ್ಥಳ ಪರಿಶೀಲನೆ

0
28

ಕಲಬುರಗಿ: ಜಿಲ್ಲೆಯಲ್ಲಿ ಜರುಗುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಇದೇ ಮಾರ್ಚ್ ೧೧ ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎ.ಸಿ.ಸಿ ಕಂಪನಿ ಗೇಟ್ ಹತ್ತಿರದ ಸುರಕ್ಷಾ ಕ್ಯಾಂಟೀನ್ ಆವರಣದಲ್ಲಿ ಶುಕ್ರವಾರದಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಮಾರ್ಚ ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಸುರಕ್ಷಾ ಕ್ಯಾಂಟೀನ್ ಆವರಣದಲ್ಲಿ ಸಾರ್ವಜನಿಕ ಸಮಾರಂಭ ಜರುಗಲಿದ್ದು, ರಾಜ್ಯದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು.

Contact Your\'s Advertisement; 9902492681

ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಚುನಾಯಿತ ಜನಪ್ರತಿನಿಧಿಗಳು, ವೇದಿಕೆ ಹಾಗೂ ಆಸನದ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಭೀಮನಗರ ಅಂಬೇಡ್ಕರ ಚೌಕ ಹತ್ತಿರ ಇರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಯೆ ಹಾಕಲಾದ ಅಂಬೇಡ್ಕರ್ ಜೀವನ ಚರಿತ್ರೆಯ ವಸ್ತು ಪ್ರದರ್ಶನ ವೀಕ್ಷಿಸಿದರು.

ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಆರೋಗ್ಯ ನಿರೀಕ್ಷಕ ಅಧಿಕಾರಿ ಲತಾ ಮಣಿಯವರಿಂದ ಜಿಲ್ಲಾಧಿಕಾರಿಯವರಿಗೆ ಸನ್ಮಾನಿಸಲಾಯಿತು.

ಬಲರಾಮ ಚೌಕ್‌ನಿಂದ ಅಂಬೇಡ್ಕರ್ ಮೂರ್ತಿಗೆವರೆಗೆ ಹಾಗೂ ವೇದಿಕೆ ಸಾಗುವ ಭವ್ಯ ಮೆರವಣಿಗೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲಸಗಳನ್ನು ನಿರ್ವಹಿಸಬೇಕು. ಸುಮಾರು ೨೫-೩೦ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ವರ್ಣರಂಜಿತ ಮೆರವಣಿಗೆ ಇರಲಿದೆ ಇದಕ್ಕೆ ಅಧಿಕಾರಿಗಳು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲು ತಿಳಿಸಿದರು.

ಈಗಾಗಲೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಹೋಗಲು ವೇದಿಕೆ ನಿರ್ವಹಣೆ, ಆಹಾರ, ಆರೋಗ್ಯ, ಕಾನೂನು ಸುವ್ಯವಸ್ಥೆ, ಮೂಲಸೌಕರ್ಯ, ಅಗ್ನಿಶಾಮಕ, ಮಾಧ್ಯಮ ನಿರ್ವಹಣೆ, ವಿದ್ಯುತ್ ಸರಬರಾಜು, ಸ್ವಚ್ಛತೆ ಸೇರಿ ವಿವಿಧ ಹಂತದ ಅಧಿಕಾರಿಗಳನ್ನೊಳಗೊಂಡ ೧೫ ತಂಡಗಳನ್ನು ರಚಿಸಲಾಗಿದೆ ಎಲ್ಲಾ ಅಧಿಕಾರಿಗಳು ತಮಗೆ ನೀಡಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹ ಅಧಿಕಾರಿ ಭಂವರ್ ಸಿಂಗ್ ಮೀನಾ, ಸೇಡಂ ಉಪವಿಭಾಗದ ಸಹಾಯಕ ಆಯುಕ್ತರ ಆಶಪ್ಪ ಪೂಜಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳಾದ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಜಾವೀದ್ ಕಾರಂಗಿ, ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾಷಾವಲಿ, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಅಭಿಯಂತರರಾದ ಶಿವನಗೌಡ ತಾಲೂಕು ಪಂಚಾಯತ್ ಇ.ಓ ನೀಲಗಂಗಾ ಬಬಲಾದ, ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಗಣ್ಯರು ಭಾಗವಗಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here