ಬಿಸಿ ಬಿಸಿ ಸುದ್ದಿ

ಶಹಾಬಾದ್; ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ

ಶಹಾಬಾದ್; ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಶನ್ ಎ.ಐ.ಡಿ.ವೈ.ಓ ಸ್ಥಳೀಯ ಸಮಿತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಅವಶ್ಯಕತೆ ಅನುಗುಣವಾಗಿ ಪ್ಯಾಸೆಂಜರ್ ರೈಲು ಹಾಗೂ ಸ್ಲಿಪ್ಪರ್ ಕೋಚಗಳ್ ಸಂಖ್ಯೆ ಹೆಚ್ಚಿಸಲು ಮತ್ತು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳು ಭರ್ತಿಗಾಗಿ ಒತ್ತಾಯಿಸಿ ಶಹಾಬಾದ್ ರೈಲು ನಿಲ್ದಾಣ ಎದುರುಗಡೆ ಪ್ರತಿಭಟಿಸಲಾಯಿತು.

ಈ ಸಭೆಯನ್ನು ಉದ್ದೇಶಿಸಿ ಎ ಐ ಡಿ ವೈ ಓ ಜಿಲ್ಲಾಧ್ಯಕ್ಷರಾದ ಜಗನ್ನಾಥ ಎಸ್, ಹೆಚ್ ಅವರು ಮಾತನಾಡುತ. ಪ್ರಯಾಣವು ಜೀವನದ ಅನಿವಾರ್ಯ ಮೂಲಭೂತ ಅವಶ್ಯಕತೆಯಾಗಿದೆ. ಈಗಿನ ಕಾಲದಲ್ಲಿ ಜೀವನೋಪಾಯವನ್ನು ಅರಸಿ ಹಳ್ಳಿಗಳು ಮತ್ತು ಪಟ್ಟಣಗಳಿಂದ ಹೆಚ್ಚಿನ ಸಂಖ್ಯೆಯ ಜನರು ನಗರಗಳಿಗೆ ಬರುತ್ತಾರೆ. ನಮ್ಮ ದೇಶದ ಆರ್ಥಿಕ ಸ್ಥಿತಿ ಹೇಗಿದೆ ಎಂದರೆ ಹೆಚ್ಚಿನ ಜನರು ಕಾಯ್ದಿರಿಸದ ಸಾಮಾನ್ಯ ದರ್ಜೆ (Uಖ) ಮತ್ತು 2 ನೇ ದರ್ಜೆಯ ಸ್ಲೀಪರ್ ಕೋಚ್‍ಗಳಲ್ಲಿ (Sಐ) ರೈಲುಗಳಲ್ಲಿ ಪ್ರಯಾಣಿಸುತ್ತಾರೆ.

ಆದರೆ ಕ್ರಮೇಣ ಸಾಮಾನ್ಯ ಮತ್ತು ಸ್ಲೀಪರ್ ಕೋಚ್‍ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ಮತ್ತೊಂದೆಡೆ ಎಸಿ ಕೋಚ್‍ಗಳನ್ನು ಹೆಚ್ಚಿಸಲಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಕಾರ್ಮಿಕ ವರ್ಗದ ಜನರಿಗೆ ಅನ್ಯಾಯವಾಗುತಿದೆ ಇವರಿಗೆ ಅನೂಕುಲವಾಗುವ ರಿತಿಯಲ್ಲಿ ರೈಲ್ವೆ ಸೌಲಭ್ಯ ಒದಗಿಸಬಕೇಂದರು.

ಮುಂದುವರೆದು ಅವರು ದೇಶದಲ್ಲಿ ಕೋಟ್ಯಾಂತರ ಯುವಕರು ಹುದ್ದೆಗಾಗಿ ಕಾಯಿತಿದ್ದಾರೆ ಇನೊಂದು ಕಡೆ ರೈಲ್ವೆಯಲ್ಲಿ 3 ಲಕ್ಷಕು ಹೆಚ್ಚು ಹುದ್ದೆ ಖಾಲಿ ಇವೆ ಈ ಎಲ್ಲ ಹುದ್ದೆಗಳನ್ನು ಭರ್ತಿಮಾಡಿ ರೈಲ್ವೆ ಸುರಕ್ಷತೆ ಹೆಚ್ಚಿಸಬೆಕೇಂದರು.

ಈ ಪ್ರತಿಭಟನೆಯಲ್ಲಿ ನಗರ ಅಧ್ಯಕ್ಷರಾದ ರಘು ಪವಾರ ಕಾರ್ಯದರ್ಶಿ ರಮೇಶ ದೇವಕರ್ ಹಾಗೂ ಸದಸ್ಯರಾದ ದೇವರಾಜ ಮೀರಲಕರ್, ಆನಂದ ದಂಡಗುಲಕರ್, ಶಾಮರಾವ್ ಪವಾರ್, ಕಿರಣ ಮಾನೆ, ಶಿವುಕುಮಾರ ಪವಾರ, ಇನ್ನಿತರು ಭಾಗವಹಿಸಿದ್ದರು. ಮನವಿ ಪತ್ರವನ್ನು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರಿಗೆ ಶಹಾಬಾದ ರೈಲ್ವೆ ಸ್ಟೇಷನ್ ಮ್ಯಾನೇಜರ್ ಮುಖಾತಂರ ಕಳುಹಿಸಲಾಯಿತ್ತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago