ಕಲಬುರಗಿ: ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಚೌಕ್ ಏರಿಯಾದಲ್ಲಿ ಒಂದೇ ನಾಯಿ ನಾಲ್ಕು ಜನರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಪ್ರಕರಣ ಮಾ.9 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜರುಗಿದೆ.
ಗಾಯಗೊಂಡವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ನಾಯಿ ಕಚ್ಚಿ ಗಾಯಗೊಳಿಸಿದ ಸುದ್ದಿ ತಿಳಿದು ಪಟ್ಟಣದ ಜನರಲ್ಲಿ ಭಯ, ಆತಂಕ ಶುರುವಾಗಿದೆ. ಮನೆಯಿಂದ ಹೊರಗೆ ಹೋಗಲು ಮಹಿಳೆಯರು ಮಕ್ಕಳು ಆತಂಕ ಪಡುವ ಸ್ಥಿತಿ ಪಟ್ಟಣದಲ್ಲಿ ನಿರ್ಮಾಣವಾಗಿದೆ.