ಕಲಬುರಗಿ: ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಮುನ್ನವೇ ಸಂಶಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಕಸ್ತೂರಿಬಾ ವಸತಿ ನಿಲಯದಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಭಾಗ್ಯಶ್ರೀ ಸಾಯಿಬಣ್ಣ ನಾಯ್ಕೋಡಿ 16 ಮೃತ ವಿದ್ಯಾರ್ಥಿನಿ. ಚಿತ್ತಾಪುರ ತಾಲೂಕಿನ ಕಡಬೂರ ಗ್ರಾಮದ ನಿವಾಸಿಯಾಗಿರುವ ಬಾಲಕಿ, ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದಳು. ತಾನು ಮಲಗುತ್ತಿದ್ದ ವಸತಿ ಕೋಣೆಯೊಂದರಲ್ಲಿನ ಮಂಚದ ರಾಡ್’ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತೆಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಚಿತ್ತಾಪುರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.