ಕಲಬುರಗಿ: ಮೂರನೇ ಮಹಾಯುದ್ಧಕ್ಕೆ ಕಾರಣವಾಗುವ ಪ್ರಮುಖ ಸಂಘರ್ಷಕ್ಕೆ ಬೆದರಿಕೆ ಹಾಕುತ್ತಿರುವ ರಾಷ್ಟ್ರಗಳ ನಡುವಿನ ಅಂತರಾಷ್ಟ್ರೀಯ ಸಂಘರ್ಷಗಳನ್ನು ಕೊನೆಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲು ಭಾರತವನ್ನು ಭದ್ರತಾ ಮಂಡಳಿಯ ಖಾಯಂ ಸದಸ್ಯರನ್ನಾಗಿ ಸೇರಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲಕುಮಾರ ಬಿಡವೆ ಒತ್ತಿ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಅನುಭವ ಮಂಟಪದಲ್ಲಿ ರವಿವಾರದಂದು, ಪ್ರವಾಸೋದ್ಯಮ ವಿಭಾಗ ಮತ್ತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಜಂಟಿಯಾಗಿ ಆಯೋಜಿಸಿದ್ದ ಜಾಗತಿಕ ತಾಪಮಾನದ ಜ್ವಲಂತ ಸಮಸ್ಯೆ ಮತ್ತು ಈ ಸಮಸ್ಯೆಯನ್ನು ನಿವಾರಿಸಲು ಅಗತ್ಯವಿರುವ ಪರಿಹಾರಗಳ ಕುರಿತು ಮಾತನಾಡಲು ವಿವಿಧ ದೇಶಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿ ಪ್ರತಿನಿಧಿಗಳಿಗಾಗಿ “ಯುವಮಂಥನ್” ಮಾದರಿ ವಿಶ್ವಸಂಸ್ಥೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಡಾ. ಬಿಡವೆ, ಜಗತ್ತಿನಲ್ಲಿ ಶಾಂತಿ ಕಾಪಾಡಲು ಮತ್ತು ರಾಷ್ಟ್ರಗಳ ನಡುವಿನ ಸಂಘರ್ಷಗಳನ್ನು ಕೊನೆಗೊಳಿಸಲು ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿದ್ದ ಐದು ಶಕ್ತಿಶಾಲಿ ರಾಷ್ಟ್ರಗಳು ಅಳವಡಿಸಿಕೊಂಡ ಅಸಹಕಾರ ಧೋರಣೆಯಿಂದಾಗಿ ರಾಷ್ಟ್ರಗಳ ನಡುವೆ ಶಾಂತಿ ಮತ್ತು ಸಂಘರ್ಷಗಳನ್ನು ಕೊನೆಗೊಳಿಸುವುದು ಈಡೇರುತ್ತಿಲ್ಲ ಎಂದರು.
ಭಾರತವು ಯಾವಾಗಲೂ ಸಂಘರ್ಷದಲ್ಲಿರುವ ರಾಷ್ಟ್ರಗಳ ನಡುವೆ ಶಾಂತಿಯನ್ನು ಸ್ಥಾಪಿಸುವಲ್ಲಿ ಮತ್ತು ಜಗತ್ತು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವಲ್ಲಿ ಸಕ್ರಿಯ ಪಾತ್ರವನ್ನು ವಹಿಸಿದೆ ಎಂದು ಡಾ ಬಿಡವೆ ತಿಳಿಸಿದರು. ರμÁ್ಯ ಮತ್ತು ಉಕ್ರೇನ್ ನಡುವಿನ ಯುದ್ಧವು ಈಗ ಅಂತ್ಯವಿಲ್ಲದೆ ಎರಡನೇ ವರ್ಷಕ್ಕೆ ಕಾಲಿಟ್ಟಿದೆ ಮತ್ತು ಪ್ರಬಲ ರಾಷ್ಟ್ರಗಳು ಉಕ್ರೇನ್ ಅನ್ನು ತಮ್ಮ ಹೊಸ ಶಸ್ತ್ರಾಸ್ತ್ರಗಳಿಗೆ ಪರೀಕ್ಷಾ ಮೈದಾನವಾಗಿ ಬಳಸುತ್ತಿವೆ. ಅಂತೆಯೇ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು ದೊಡ್ಡ ಬಿಕ್ಕಟ್ಟಾಗಿ ಬೆಳೆಯುತ್ತಿದೆ, ಇದು ವಿಶ್ವದ ಮೂರನೇಯ ಮಹಾಯುದ್ಧಕ್ಕೆ ಕಾರಣವಾಗಬಹುದು. ಭಾರತವು ಯುಎನ್‍ಒದ ಭದ್ರತಾ ಮಂಡಳಿಯ ಖಾಯಂ ಸದಸ್ಯನಾಗುವ ತನ್ನ ದೀರ್ಘಾವಧಿಯ ಬೇಡಿಕೆಯನ್ನು ಈಡೇರಿಸುವ ಮೂಲಕ ಈ ಸಂಘರ್ಷವನ್ನು ಕೊನೆಗೊಳಿಸಲು ಭಾರತವು ಪ್ರಮುಖ ಪಾತ್ರವನ್ನು ವಹಿಸಲು ಅವಕಾಶ ನೀಡಬೇಕು ಎಂದು ಹೇಳಿದರು.
ಯುಎನ್‍ಒದ ಇಂತಹ ಮಾದರಿ ಸಭೆಯನ್ನು ಆಯೋಜಿಸಲು ಎರಡೂ ವಿಭಾಗಗಳ ಈ ಕಾರ್ಯವನ್ನು ಶ್ಲಾಘಿಸಿದ ಅವರು, ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಬಹಳ ಅನುಕೂಲವಾಗುತ್ತದೆ ಮತ್ತು ಇಂತಹ ಸಭೆಗಳನ್ನು ಆಯೋಜಿಸುವುದರಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಲು ಮತ್ತು ಅವರ ಶೈಕ್ಷಣಿಕ ಸುಧಾರಣೆಗೆ ಸಾಕಷ್ಟು ಸಹಾಯವಾಗುತ್ತದೆ. ಪ್ರವಾಸೋದ್ಯಮ ವಿಭಾಗದ ಚೇರಪರ್ಸನ್ ಡಾ. ವಾಣಿಶ್ರೀ ಸಿ ಟಿ ಸ್ವಾಗತಿಸಿದರು.
ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್.ಎಚ್.ಹೊನ್ನಳ್ಳಿ, ಪತ್ರಿಕೋದ್ಯಮ ವಿಭಾಗದ ಡೀನ್ ಶ್ರೀ ಟಿ.ವಿ.ಶಿವಾನಂದನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಂದ ಕೂಟದ ಸಂಪೂರ್ಣ ನಡಾವಳಿಗಳು ನಡೆದಿರುವುದು ಸಭೆಯ ವಿಶೇಷತೆಯಾಗಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…