ಸುರಪುರ :ನಗರದ ಕಬಾಡಗೇರಾ ನಿಷ್ಠಿ ಕಡ್ಲಪ್ಪನವರ ವಿರಕ್ತ ಮಠದಲ್ಲಿ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮಿಗಳ 48ನೆ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶರಣ ಚರಿತಾಮೃತ ಪ್ರವಚನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ(ಮಾ11) ಪ್ರಾರಂಭವಾಗಲಿವೆ.
ಮಾ11 ರಿಂದ 19ವರೆಗೆ ನಡೆಯಲಿರುವ ಶರಣ ಚರಿತಾಮೃತ ಪ್ರವಚನ ಕಾರ್ಯಕ್ರಮ ಉದ್ಘಾಟನೆ ಸೋಮವಾರದಂದು ಸಾಯಂಕಾಲ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಮಠ ಖೇಳಗಿ ಉದ್ಘಾಟಿಸುವರು ಮಠದ ಪೀಠಾಧಿಪತಿಗಳಾದ ಪ್ರಭುಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸುವರು ಶಿವಶರಣಯ್ಯಶಾಸ್ತ್ರಿಗಳು ಚಿಣಮಗೇರಿ ಪ್ರವಚನ ನಡೆಸಿಕೊಡಲಿದ್ದಾರೆ ಆಕಾಶವಾಣಿ ಕಲಾವಿದ ಶರಣುಕುಮಾರ ಯಾಳಗಿ ಸಂಗೀತ ಸೇವೆ ಹಾಗೂ ರಾಜಶೇಖರ ಗೆಜ್ಜಿ ತಬಲಾ ಸಾಥ ನೀಡುವರು.
ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಪ್ರಯುಕ್ತ ಇಷ್ಟಲಿಂಗ ಪೂಜೆ, ರುದ್ರಾಕ್ಷಿಧಾರಣೆ,ಉಚಿತ ಆರೋಗ್ಯ ತಪಾಸಣೆ ಮಹಾರುದ್ರಾಭಿಷೇಕ,ಸಹಸ್ರ ಬಿಲ್ವಾರ್ಚನೆ, ಷಟಸ್ಥಲ ಧ್ವಜಾರೋಹಣ,ಭರತ ನಾಟ್ಯ,ಸಾಧಕರಿಗೆ ಗೌರವ ಶ್ರೀರಕ್ಷೆ,ಧರ್ಮಸಭೆ ಹಾಗೂ ಸಂಗೀತ ದರ್ಬಾರ ಮುಂತಾದ ಕಾರ್ಯಕ್ರಮಗಳು ನೆರವೇರಲಿವೆ ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾ18 ರಂದು ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ನಡೆಯಲಿದೆ. ಮಾ17 ರಂದು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ,ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ,ಪ್ರಬಂಧ ಸ್ಪರ್ರ್ಧೆ ನಡೆಯಲಿವೆ ಅಂದು ಸಾಯಂಕಾಲ ಸಾಧಕರಿಗೆ ಶ್ರೀರಕ್ಷೆ ಕಾರ್ಯಕ್ರಮ ನಡೆಯಲಿದ್ದು ಶ್ರೀ ಮುರುಘೇಂದ್ರ ಶಿವಯೋಗಿಗಳ ವಿರಕ್ತಮಠ ಯಡ್ರಾಮಿಯ ಸಿದ್ಧಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು ಕೊಡೇಕಲ್ ದುರದುಂಡೇಶ್ವರ ವಿರಕ್ತ ಮಠದ ಶಿವಕುಮಾರ ಮಹಾಸ್ವಾಮಿಗಳು ಸಮ್ಮುಖ ವಹಿಸುವರು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಗುವುದು.
ಮಾ18 ರಂದು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಮಾ19 ರಂದು ಬೆಳಿಗ್ಗೆ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭಿಷೇಕ ಮತ್ತು ಸಹಸ್ರ ಬಿಲ್ವಾರ್ಚನೆ, ಸಾಯಂಕಾಲ 7ಗಂಟೆಗೆ ಧರ್ಮಸಭೆ, ಶರಣ ಚರಿತಾಮೃತ ಪ್ರವಚನ ಮಹಾ ಮಂಗಲ, ಕಾರ್ಯಕ್ರಮ ನಡೆಯಲಿವೆ ದೇವಾಪುರ ಜಡೆಶಾಂತಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಿವಮೂರ್ತಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು ನಂದಿಮಠ ವಡವಡಗಿಯ ವೀರಸಿದ್ಧ ಮಹಾಸ್ವಾಮಿಗಳು ಸಾನಿಧ್ಯ, ಪ್ರಭುಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸುವರು ಗಜೇಂದ್ರಗಡದ ಕಾಲಜ್ಞಾನಮಠದ ಶರಣಬಸವೇಶ್ವರ ಮಹಾಸ್ವಾಮಿಗಳಿಮದ ಉಪಾದೇಶಮೃತ ಸುರಪುರ ಸಂಸ್ಥಾನದ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಉದ್ಘಾಟಿಸುವರು ನ್ಯಾಯವಾದಿ ಶರಣಬಸಪ್ಪ ನಿಷ್ಠಿ ಜಾಹಗೀರದಾರ, ಕೆವೈ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ.ಸುರೇಶ ಸಜ್ಜನ್, ನಗರಸಭೆ ಸದಸ್ಯ ವೇಣುಮಾಧವ ನಾಯಕ ಉಪಸ್ಥಿತಿ. ರಾತ್ರಿ ಗಂಟೆಯಿಂದ ಆಕಾಶವಾಣಿ ಕಲಾವಿದ ಆಮಯ್ಯಸ್ವಾಮಿ ಹಿರೇಮಠ ಅಧ್ಯಕ್ಷತೆಯಲ್ಲಿ ಸಂಗೀತ ದರ್ಬಾರ ಕಾರ್ಯಕ್ರಮಗಳು ನಡೆಯಲಿವೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…