ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ 4ರ ವೆಂಕಟೇಶ್ವರ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಲ್ಲಿ ಸಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತರ ನಗರಾಧ್ಯಕ್ಷ ಮಹ್ಮದ್ ಯುನೋಸ್ ಆರೋಪಿಸಿದರು.
ವಾರ್ಡ್’ನಲ್ಲಿ ರಸ್ತೆ ಕಾಮಗಾರಿ ಗುಣಮಟ್ಟದಿಂದ ಸಾಗಿದರೇ ವಾರ್ಡ್’ನ ನಿವಾಸಿಗಳಿಗೆ ಖುಷಿಯಾಗುತ್ತದೆ. ಆದರೆ ಕಳಪೆ ಮಟ್ಟದಿಂದ ಮಾಡಿದರೇ ರಸ್ತೆಯ ಗುಣಮಟ್ಟ ಕಳೆದುಕೊಳ್ಳುವುದರಿಂದ ವಾಹನ ಸವಾರರಿಗೆ ಹಾಗೂ ನಿವಾಸಿಗಳಿಗೆ ತೊಂದರೆ ಉಂಟಾಗುತ್ತದೆ ಎಂದರು.
ವಾರ್ಡ್’ನಲ್ಲಿರುವ ರಸ್ತೆ ಕಾಮಗಾರಿ ಸಂಪೂರ್ಣ ಗುಣಮಟ್ಟದಿಂದ ನಡೆಯಬೇಕು ಎಂದು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪುರಸಭೆ ಜೆಇ ಗುತ್ತಿಗೆದಾರರ ಜೊತೆ ಸೇರಿ ಕಳಪೆ ಕಾಮಗಾರಿ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿದ್ದಾರೆ. ಎಸ್ಟಿಮೆಂಟ್ ಪ್ರಕಾರ ಕಾಮಗಾರಿ ಮಾಡಿದರೇ ಯಾರಿಗೊ ತೊಂದರೆ ಆಗಲ್ಲ ಆದರೆ ಕಳಪೆ ಕಾಮಗಾರಿ ಮಾಡುತ್ತಿರುವುದರಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಸರ್ಕಾರ ಗುಣಮಟ್ಟದಲ್ಲಿ ಕಾಮಗಾರಿ ನಡೆಯಲಿ ಎಂದು ಎಸ್ಟಿಮೆಂಟ್ ಪ್ರಕಾರ ಅನುದಾನ ಬಿಡುಗಡೆಗೊಳಿಸುತ್ತದೆ. ಆದರೆ ಅಧಿಕಾರಿಗಳಾದವರೂ ಗುಣಮಟ್ಟದಿಂದ ಸಾಗಿದೆ ಅಥವಾ ಇಲ್ಲ ಎನ್ನುವುದನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಬೇಕು. ಆದರೆ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ಕೊಡದೇ ಗುತ್ತಿಗೆದಾರರ ಜೊತೆ ಸಂಬಂಧ ಪಟ್ಟ ಅಧಿಕಾರಿಗಳು ಶಾಮಿಲಾಗಿ ಅವರು ಮಾಡುತ್ತಿರುವ ಕೆಲಸ ಗುಣಮಟ್ಟದಿಂದ ಸಾಗಿದೆ ಎಂದು ಹೇಳುತ್ತಿರುವುದು ಎಷ್ಟರ ಮಟ್ಟಿಗೆ ಸರೀ ಎಂದು ಅವರು ಪ್ರಶ್ನಿಸಿದರು.
ವಾರ್ಡ’ನ ರಸ್ತೆ ಕಾಮಗಾರಿಯಲ್ಲಿ ಸರ್ಕಾರದ ಸಾಕಷ್ಟು ಹಣ ದುರ್ಬಳಕೆ ಆಗಿದೆ. ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಹಾಗೂ ಸಚಿವರು ಈ ಕಡೆ ಗಮನ ಹರಿಸಿ ಬೇಜವಾಬ್ದಾರಿ ಅಧಿಕಾರಿಗಳ ಹಾಗೂ ಗುತ್ಯಿಗೆದಾರರ ವಿರುದ್ಧ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಂಡು ಗುಣಮಟ್ಟದ ಕಾಮಗಾರಿ ನಡೆಯುವ ನಿಟ್ಟನಲ್ಲಿ ನಿಗಾ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…