ಬೀದರ್; ರಾಜ್ಯದ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಎನ್‍ಸಿಬಿ ಹಾಗೂ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ಕೈಗೊಂಡು ಸುಮಾರು 15.50 ಕೋಟಿ ರೂ.ಗಳ ಮೌಲ್ಯದ 1,596 ಕೆಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಜಿಲ್ಲೆಯ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಗಾಂಜಾವನ್ನು ಪೋಲಿಸರು ಜಪ್ತಿ ಮಾಡಿದರು. ಖಚಿತ ಭಾತ್ಮಿ ಮೇರೆಗೆ ಜಿಲ್ಲೆಯ ಔರಾದ್ ತಾಲ್ಲೂಕಿನ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ ಕಾರ್ಯಾಚರಣೆ ಕೈಗೊಂಡು ಅಕ್ರಮ ಗಾಂಜಾ ಪ್ಯಾಕೆಟ್‍ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಚಾಲಕ ಮತ್ತು ಕ್ಲೀನರ್ ಅವರಿಗೆ ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಎನ್‍ಸಿಬಿ ಪೋಲಿಸರು ವಿಚಾರಣೆ ಮಾಡುತ್ತಿದ್ದಾರೆ. ಈ ಕುರಿತು ಔರಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.