13 ರಂದು ಗ್ಯಾರೆಂಟಿ ಯೋಜನೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಪಾಟನೆ; ಡಿಸಿಯಿಂದ ಸ್ಥಳ ಪರಿಶೀಲನೆ

0
24

ಕಲಬುರಗಿ; ಜಿಲ್ಲಾಡಳಿತ ಹಾಗೂ ಪಂಚಾಯತ ಕಲಬುರಗಿ ಅವರ ಸಂಯುಕ್ತಾಶ್ರದಲ್ಲಿ ಜಿಲ್ಲೆಯಲ್ಲಿ ಜರುಗುತ್ತಿರುವ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಮಾರ್ಚ 13 ರಂದು ನೂತನ ವಿದ್ಯಾಲಯ ಆಟದ ಮೈದಾ£ದಲ್ಲಿ ಆವರಣದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.

ಸೋಮವಾರದಂದು ನೂತನ ವಿದ್ಯಾಲಯ ಆಟದ ಮೈದಾನದಲ್ಲಿ ವಿವಿಧ ಕೆಲಸ ನಿರ್ವಹಣೆಗೆ ನೇಮಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಾರ್ಚ 13 ರಂದು ಬೆಳಿಗ್ಗೆ 10 ಗಂಟೆಗೆ ನೂತನ ವಿದ್ಯಾಲಯ ಆಟದ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ಇರಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಉದ್ಫಾಟಿಸುವರು ಅಧ್ಯಕ್ಷರು, ಶಾಸಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದರು.

Contact Your\'s Advertisement; 9902492681

ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಚುನಾಯಿತ ಜನಪ್ರತಿನಿಧಿಗಳು, ಶಾಸಕರು, ಡಿ.ಸಿ., ಜಿಲ್ಲಾ ಪಂಚಾಯತ ಸಿ.ಇ.ಓ ಸೇರಿ ಎಲ್ಲ ಹಿರಿಯ ಅಧಿಕಾರಿಗಳು ಭಾಗವಹಿಸುವುದರಿಂದ ಸೂಕ್ತ ಪೆÇಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಅಲ್ಲದೆ ವಾಹನಗಳ ಪಾಕಿರ್ಂಗ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಹೋಗಲು ವೇದಿಕೆ ನಿರ್ವಹಣೆ, ಆಹಾರ, ಆರೋಗ್ಯ, ಕಾನೂನು ಸುವ್ಯವಸ್ಥೆ, ಮೂಲಸೌಕರ್ಯ, ಅಗ್ನಿಶಾಮಕ, ಮಾಧ್ಯಮ ನಿರ್ವಹಣೆ, ವಿದ್ಯುತ್ ಸರಬರಾಜು, ಸ್ವಚ್ಛತೆ ಸೇರಿ ವಿವಿಧ ಹಂತದ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಿದ್ದು, ಎಲ್ಲರೂ ಸಮನ್ವಯತೆಯಿಂದ ಕೆಲಸ ನಿರ್ವಹಿಸಲು ಸೂಚಿಸಿದರು. ಸಮಿತಿಗೆ ನೀಡಲಾದ ಕೆಲಸ ಕಾರ್ಯಗಳನ್ನು ಅಧಿಕಾರಿಗಳು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ಕರ್ತವ್ಯ ಲೋಪಕ್ಕೆ ಅವಕಾಶ ನೀಡಬಾರದೆಂದು ಅವರು ಸೂಚಿಸಿದರು.
ಸಭೆಯ ನಂತರ ಜಿಲ್ಲಾಧಿಕಾರಿ ಸ್ಥಳದ ಪರಿಶೀಲನೆ ನಡೆಸಿ, ವೇದಿಕೆ, ವಿ.ಐ.ಪಿ,. ಕುರ್ಚಿಗಳು ಕುಡಿಯುವ ನೀರು ಶೌಚಾಲಯ, ಊಟದ ವ್ಯವಸ್ಥೆ ಎಲ್ಲವನ್ನು ಸ್ವಚ್ಪತೆಯನ್ನು ಕಾಪಾಡಿಕೊಂಡು ಹೋಗಲು ಸೂಚಿಸಿದರು.

ಸಭೆಯಲ್ಲಿ ನಗರ ಪೋಲಿಸ ಆಯುಕ್ತ ಚೇತನ್ ಆರ್, ಡಿಸಿಪಿ ಕನಿಕಾ ಸಿಕ್ರಿವಾಲ್ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹ ಅಧಿಕಾರಿ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತರಾದ ಪಾಟೀಲ್ ಭುವನೇಶ ದೇವಿದಾಸ, ಅಪರ ಜಿಲ್ಲಾಧಿಕಾರಿ ರಾಯಪ್ಪ್ ಸಹಾಯಕ ಆಯುಕ್ತೆ ರೂಪಿಂದ್ರ ಕೌರ್À ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಜಾವೀದ್ ಕಾರಂಗಿ, ಜಂಟಿ ನಿರ್ದೇಶಕ ಸಮದ್ ಪಟೇಲ್, ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here