ಬಿಸಿ ಬಿಸಿ ಸುದ್ದಿ

ಶಿಕ್ಷಣವು ಮಾನವೀಯತೆಯ ಪ್ರಗತಿಗೆ ಪ್ರೇರಕ ಶಕ್ತಿ: ರಾಜ್ಯಪಾಲರು

ಬೆಂಗಳೂರು/ವಿಜಯಪುರ; ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಬಹಳ ಮುಖ್ಯ. ಆ ದೇಶದ ಮಹಿಳೆಯರು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಪಾಲ್ಗೊಂಡಾಗ ಮಾತ್ರ ಯಾವುದೇ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಹೇಳಿದ್ದರು, ನೀವು ಸಮಾಜದ ಪ್ರಗತಿಯ ಬಗ್ಗೆ ನಿಖರವಾಗಿ ತಿಳಿದುಕೊಳ್ಳಬೇಕಾದರೆ, ಆ ಸಮಾಜದ ಮಹಿಳೆಯರ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಿ. ಇಂದಿನ ಮಹಿಳೆಯರು ಕೌಟುಂಬಿಕ ಮತ್ತು ಸಾಮಾಜಿಕ ಜವಾಬ್ದಾರಿಗಳ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದÀ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ ಎಂದರು.

ಲಿಂಗ ಸಮಾನತೆಯ ತತ್ವವನ್ನು ಭಾರತೀಯ ಸಂವಿಧಾನದ ಪೀಠಿಕೆ, ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು ಮತ್ತು ನಿರ್ದೇಶನ ತತ್ವಗಳಲ್ಲಿ ಪ್ರತಿಪಾದಿಸಲಾಗಿದೆ. ಸಂವಿಧಾನವು ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ನೀಡುವುದು ಮಾತ್ರವಲ್ಲದೆ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯಕ್ಕೆ ಹಕ್ಕುಗಳನ್ನು ನೀಡುತ್ತದೆ ಎಂದು ಹೇಳಿದರು.

ಮಹಿಳೆಯರ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ರಕ್ಷಿಸಲು, 1990 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವನ್ನು ಸ್ಥಾಪಿಸಲಾಯಿತು. ಭಾರತೀಯ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಮೂಲಕ ಮಹಿಳೆಯರಿಗೆ ಪಂಚಾಯತ್ ಮತ್ತು ಪುರಸಭೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾನಗಳ ಮೀಸಲಾತಿಯನ್ನು ಒದಗಿಸಲಾಗಿದೆ. 128 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆ, ಮಹಿಳಾ ಮೀಸಲಾತಿ ಮಸೂದೆ 2023 ಅಥವಾ ನಾರಿ ಶಕ್ತಿ ವಂದನ್ ಕಾಯ್ದೆಯ ಮೂಲಕ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಮತ್ತು ಅವರಿಗೆ ಅಭಿವೃದ್ಧಿ ಮತ್ತು ಭದ್ರತೆಗೆ ಅವಕಾಶಗಳನ್ನು ಒದಗಿಸಲು ವಿವಿಧ ಯೋಜನೆಗಳನ್ನು ಪ್ರಾರಂಭಿಸಿದೆ. ಬೇಟಿ ಬಚಾವೋ ಬೇಟಿ ಪಢಾವೋ, ವಕಿರ್ಂಗ್ ವುಮೆನ್ ಹಾಸ್ಟೆಲ್, ಒನ್-ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳಾ ಪೆÇಲೀಸ್ ಸ್ವಯಂಸೇವಕರು, ಉಜ್ವಲಾ ಯೋಜನೆ, ಮಹಿಳಾ ಶಕ್ತಿ ಕೇಂದ್ರ ಮತ್ತು ಇತರ ಹಲವು ಯೋಜನೆಗಳ ಮೂಲಕ ಭಾರತ ಸರ್ಕಾರವು ಹೆಚ್ಚು ಅಂತರ್ಗತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಶಿಕ್ಷಣವು ಮಾನವೀಯತೆಯ ಪ್ರಗತಿಗೆ ಪ್ರೇರಕ ಶಕ್ತಿ ಎಂದು ನಮಗೆಲ್ಲರಿಗೂ ತಿಳಿದಿದೆ. ಇದು ರಾಷ್ಟ್ರವನ್ನು ಹೆಚ್ಚು ಶಕ್ತಿಯುತ ಮತ್ತು ಶ್ರೇಷ್ಠವನ್ನಾಗಿ ಮಾಡುವ ಸಾಮಥ್ರ್ಯವನ್ನು ಹೊಂದಿದೆ. ರಾಷ್ಟ್ರದ ಪ್ರಗತಿಯಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ನೀತಿ ನಿರೂಪಕರು ಅರಿತುಕೊಂಡಿದ್ದಾರೆ ಮತ್ತು ಆದ್ದರಿಂದ ಇತ್ತೀಚಿನ ದಶಕಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಧನ ಗಳಿಸಲು ಲಕ್ಷ್ಮಿ ಪೂಜೆ ಮಾಡುತ್ತೇವೆ, ವಿದ್ಯೆಗಾಗಿ ಸರಸ್ವತಿ ಹಾಗೂ ಶಕ್ತಿಗಾಗಿ ದುರ್ಗಾ ಮಾತೆಯನ್ನು ಪೂಜಿಸುತ್ತೇವೆ. ಇದರ ಅರ್ಥ ಪ್ರಾಚೀನ ಕಾಲದಿಂದಲೂ ಮಹಿಳೆಯನ್ನು ಪೂಜಿಸುತ್ತ ಬಂದಿದ್ದೇವೆ. ಮಹಿಳೆಯ ಮನಸ್ಸು ಮಾಡಿದರೆ ಸಾಧನೆಗಳ ಉತ್ತುಂಗಕ್ಕೆ ತಲುಪಬಹುದು. ಈ ಮಹಿಳಾ ವಿಶ್ವವಿದ್ಯಾಲಯವು ಶಿಕ್ಷಣದ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದ ವಿಷಯವಾಗಿದೆ, ಇದಕ್ಕಾಗಿ ವಿಶ್ವವಿದ್ಯಾಲಯದ ಕುಟುಂಬದ ಎಲ್ಲ ಸದಸ್ಯರಿಗೆ ಅಭಿನಂದನೆಗಳು. ಪದವಿ ಸ್ವೀಕರಿಸಿದ ಎಲ್ಲಾ ವಿದ್ಯಾರ್ಥಿನಿಯರು ದೇಶವನ್ನು ಸರ್ವೋಚ್ಚ ಎಂದು ಪರಿಗಣಿಸಿ, ದೇಶದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಘಟಿಕೋತ್ಸವದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್.ಅಪ್ಪ. ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಕುಲಪತಿಗಳಾದ ಪೆÇ್ರ. ಬಿ. ಕೆ. ತುಳಸಿಮಾಲಾ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago