ಬಿಸಿ ಬಿಸಿ ಸುದ್ದಿ

ಕಲಬುರಗಿ ಕೇಂದ್ರಿಯ ವಿವಿಯ ವಾತಾವರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ

ಜಾತಿ ಹಾಗೂ ಧರ್ಮದ‌ ಆಧಾರದ ಮೇಲೆ‌ ಸಮಾಜವನ್ನು ಇಬ್ಭಾಗಿಸುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರಿಯ ವಿವಿ ಬರಲು ನಡೆಸಿದ ಹೋರಾಟ ಕಣ್ಣ ಮುಂದಿದೆ. ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಇಲ್ಲಿನ‌ ಪರಿಸ್ಥಿತಿ ಗಮನಿಸಿದರೆ ಇಲ್ಲಿನ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ ಎಂದು ಗ್ರಾಮಿಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಆಳಂದ ತಾಲೂಕಿನ ಕಡಗಂಚಿಯ ಕೇಂದ್ರಿಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಎಸ್ ಸಿ / ಎಸ್ ಟಿ ನೌಕರರ ಕಲ್ಯಾಣ ಸಂಘ ಏರ್ಪಡಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ತತ್ವಗಳು ವಿಚಾರಸಂಕೀರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿಚಾರ ಸಂಕಿರಣ‌ ಏರ್ಪಡಿಸಲು ವಿವಿಯ ರಿಜಿಸ್ಟ್ರಾರ್ ಅವರ ಹಾಕಿರುವ ಷರತ್ತುಗಳ ಪತ್ರ ಪ್ರದರ್ಶಿಸಿ ಕಟುವಾಗಿ ಟೀಕಿಸಿದ ಸಚಿವರು, ಶೈಕ್ಷಣಿಕ ಸಮಗ್ರತೆಗೆ ಧಕ್ಕೆ ತರದಂತೆ ಕಾರ್ಯಕ್ರಮ ನಡೆಸಬೇಕೆನ್ನುವ ಷರತ್ತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಇಂದಿನ ಕಾರ್ಯಕ್ರಮದಲ್ಲಿ ಜನರಿಂದ ಆಯ್ಕೆಯಾದ ಈ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಭಾಗವಾಗಿರುವ ನಾನು ಭಾಗವಹಿಸುವ ಕಾರ್ಯಕ್ರಮಕ್ಕೆ ಇಷ್ಟೊಂದು ಷರತ್ತು ಹಾಗೂ ಪೊಲೀಸ್ ಭದ್ರತೆ ಹಾಕುವ ಅವಶ್ಯಕತೆ ಏನಿತ್ತು? ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ವಿವಿಯ ಕುಲಪತಿಗೆ ಅಥವಾ ರಿಜಿಸ್ಟ್ರಾರ್ ಗೆ ಪತ್ರ ಬರೆಯಲು ಕೋರುತ್ತೇನೆ ಎಂದರು.

ವಿವಿಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನಿನ ಅಡಿಯಲ್ಲಿ ಪ್ರಶ್ನಿಸಿ ನಾನು ನಿಮ್ಮೊಂದಿಗೆ ಇದ್ದೇನೆ, ಇರುತ್ತೇನೆ. ವಿವಿಗೆ ಬರದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಪದೇ ಪದೇ ಬರುತ್ತೇನೆ. ಒಟ್ಟಿನಲ್ಲಿ ಉಸಿರುಕಟ್ಟುವ ವಾತಾವರಣ‌ ನಿರ್ಮಾಣವಾಗದಂತೆ ತಡೆಯಬೇಕು ಎಂದರು.

ವಿವಿಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಒಟ್ಟು 25 ಕೇಸುಗಳು ದಾಖಲಾಗಿರುವ ಬಗ್ಗೆ ಪೊಲೀಸರೊಂದಿಗೆ ವೇದಿಕೆಯಿಂದಲೇ ಮಾತನಾಡಿದ ಸಚಿವರು ಕೇಸುಗಳ ವಿವರವನ್ನು ನಾಳೆ ನನಗೆ ತಿಳಿಸಬೇಕು ಎಂದು ಸ್ಥಳದಲ್ಲಿ ಇದ್ದ DSP ಗೆ ಸೂಚಿಸಿದರು.

ಭಾರತ ಪ್ರಪಂಚದ ಅತಿದೊಡ್ಡ ಪ್ರಜಾತಂತ್ರ ರಾಷ್ಟ್ರವಾಗಿ ಉಳಿದಿರುವುದಕ್ಕೆ ಕಾರಣವೇ ಸಂವಿಧಾನವಾಗಿದೆ. ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗಳು ನಡೆದು ಕೊನೆಗೆ ಮಹಾತ್ಮಾ ಗಾಂಧಿ‌ ಅವರು ಡಾ ಬಾಬಾಸಾಹೇಬರಿಗೆ ಆ ಜವಾಬ್ದಾರಿ ವಹಿಸಲಾಯಿತು. ಅದರಂತೆ ಏಳು ಜನ ಸದಸ್ಯರ ಸಮಿತಿ ರಚಿಸಲಾಯಿತು ಎಂದು ವಿವರಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago