ಚಿತ್ತಾಪುರ: ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.
ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಆರು ಜನರ ವಾರಸುದಾರರಿಗೆ ತಲಾ ರೂ 2 ಲಕ್ಷದ ಪರಿಹಾರದ ಚೆಕ್ ನ್ನು ವಿತರಿಸಿದರು.
ರಸ್ತೆ ಅಪಘಾತದಲ್ಲಿ ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ, 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಈ ಸಂದರ್ಭದಲ್ಲಿ ಮಹೆಮೂದ್ ಸಾಹೇಬ್, ಶಿವಾನಂದ ಪಾಟೀಲ್, ವೀರನಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ತಹಸೀಲ್ದಾರ ಶಾ ವಲಿ ಸೇರಿದಂತೆ ಹಲವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…