ಚಿತ್ತಾಪುರ: ಇತ್ತೀಚಿಗೆ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.
ಬಾಲಕಿ ಆತ್ಮಹತ್ಯೆ ಗೆ ದುಃಖ ವ್ಯಕ್ತಪಡಿಸಿದ ಸಚಿವರು ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್ ಮಾಡಿಸಲಾಗುವುದು ಎಂದರು.
ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ಕಾಂಗ್ರೆಸ್ ಪಕ್ಷದ ವತಿಯಿಂದ ರೂ 1 ಲಕ್ಷ ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.
ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ ಲ, ತಹಸೀಲ್ದಾರ ಶಾ ವಲಿ ಸೇರಿದಂತೆ ಹಲವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…