ಕಲಬುರಗಿ: ಕಲಬುರಗಿ ನಗರದಲ್ಕಿ ಮಾರ್ಚ್ 13 (ಬುಧವಾರ) ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನಿಡಲಿರುವ ಹಿನ್ನೆಲೆಯಲ್ಲಿ
ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ನಗರದ ಎನ್.ವಿ.ಮೈದಾನಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆ ಪರಿಶೀಲಿಸಿದರು.
ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುವ ಕಾರಣ ಎನ್.ವಿ.ಮೈದಾನದಲ್ಲಿ ಸೂಕ್ತ ಅಸನ ಭದ್ರತಾ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಊಟಕ್ಕೆ ಪ್ರತ್ಯೇಕ ಕೌಂಟರ್ ತೆರೆಯಬೇಕು. ಅಲ್ಲಲ್ಲಿ ಬಯೋ ಟಾಯಲೆಟ್ ಅಲವಡಿಸಬೇಕು. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕೆಂದ ಸಚಿವರು, ಕಾರ್ಯಕ್ರಮದ ರೂಪು ರೇಷೆ ಕುರಿತು ಇವೆಂಟ್ ಮ್ಯಾನೇಜರ್ ಗಳಿಂದ ಮಾಹಿತಿ ಪಡೆದರು.
ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ತಾಲೂಕಿನಿಂದ ಬರುವ ಜನರಿಗೆ ಬೆಳಿಗ್ಗೆ ದಾರಿ ಮದ್ಯದಲ್ಲಿಯೇ ಉಪಹಾರದ ವ್ಯವಸ್ಥೆ ಮಾಡಬೇಕು. ಒಟ್ಟಾರೆಯಾಗಿ ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಡಿ.ಸಿ.ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಸಹಾಯಕ ಆಯುಕ್ತರಾದ ರೂಪಿಂದರ್ ಕೌರ್, ಆಶಪ್ಪ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…